ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಮತ್ತೆ ಇಳಿಕೆ, ಇಂದು 11,958 ಮಂದಿಗೆ ಸೋಂಕು, 27,299 ಮಂದಿ ಗುಣಮುಖರು
ಬೆಂಗಳೂರು: ರಾಜ್ಯದಲ್ಲಿ ಇಂದು ಕೂಡ ಕೊರೊನಾ ಸೋಂಕು ಇಳಿಕೆಯಾಗಿದೆ. ಇಂದು ಕಳೆದ 24 ಗಂಟೆಯಲ್ಲಿ 11,958 ಜನರಿಗೆ ಸೋಂಕು ತಗುಲಿದೆ.
ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 11,958 ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 27,07,481 ಕ್ಕೆ ಏರಿಕೆಯಾಗಿದೆ.
ಕಿಲ್ಲರ್ ಕೊರೊನಾ ಸೋಂಕಿಗೆ ಕಳೆದ 24 ಗಂಟೆಯಲ್ಲಿ 340 ಸೋಂಕಿತರು ಸಾವನ್ನಪ್ಪಿದ್ದು, ಇದುವರೆಗೆ 31,920 ಸೋಂಕಿತರು ಸಾವನ್ನಪ್ಪಿದ್ದಾರೆ. ಇಂದು 27,299 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 24,36,716 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ 2,38,824 ಸಕ್ರಿಯ ಪ್ರಕರಣಗಳಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಹೆಚ್ಚಿನ ಸುದ್ದಿಗಾಗಿ ನಮ್ಮ ಸೈಟಿಗೆ ಬೇಟಿ ಕೊಡಿ Click
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೂಡ ಇಂದು ಕೊರೊನಾ ಇಳಿಮುಖವಾಗಿದೆ., ಹೊಸದಾಗಿ 1992 ಜನರಿಗೆ ಸೋಂಕು ತಗುಲಿದೆ. ಇಂದು 11,488 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಕಿಲ್ಲರ್ ಕೊರೊನಾ ಸೋಂಕಿಗೆ 199 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.
#ಮನೆಯಲ್ಲಿರಿ ಆರೋಗ್ಯವಾಗಿರಿ, ನಮ್ಮ ಆರೋಗ್ಯದ ರಕ್ಷಣೆ ನಮ್ಮ ಕೈಯಲ್ಲಿದೆ