ಹಾಗಾದರೆ ಈ 13 ಜಿಲ್ಲೆಗಳಲ್ಲಿ ಸಡಿಲಿಕೆ ಏನು? 11-06-2021 ರ ಆದೇಶ ಏನು??

ಹಾಗಾದರೆ ಈ 13 ಜಿಲ್ಲೆಗಳಲ್ಲಿ ಸಡಿಲಿಕೆ ಏನು? 11-06-2021 ರ ಆದೇಶ ಏನು??

ಹಾಸನ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಾಮರಾಜನಗರ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ದಾವಣಗೆರೆ, ಧಾರವಾಡ, ಕೊಡಗು ಬಳ್ಳಾರಿ, ಚಿತ್ರದುರ್ಗ, ವಿಜಯಪುರ 



ಪಾಸಿಟಿವಿಟಿ ದರ ಶೇಕಡ %5ಕ್ಕಿಂತ ಹೆಚ್ಚು ಇರುವಂತ 13 ಜಿಲ್ಲೆಗಳಾದಂತ ಹಾಸನ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಾಮರಾಜನಗರ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ದಾವಣಗೆರೆ, ಧಾರವಾಡ, ಕೊಡಗು ಬಳ್ಳಾರಿ, ಚಿತ್ರದುರ್ಗ, ವಿಜಯಪುರ ಜಿಲ್ಲೆಗಳಲ್ಲಿ ದಿನಾಂಕ 11-06-2021ರ ಆದೇಶವೇ ಮುಂದುವರೆಯಲಿದೆ ಎಂದು ಸಿಎಂ ತಿಳಿಸಿದರು.


ದ.ಕ ಜಿಲ್ಲೆ ಸೇರಿ 13 ಜಿಲ್ಲೆಗಳಲ್ಲಿ ಈ ಸಡಿಲಿಕೆ ಮಾತ್ರ, ಸೋಮವಾರದಿಂದ ಅನ್ವಯ


• ಎಲ್ಲಾ ಕಾರ್ಖಾನೆಗಳನ್ನು ಶೇ. 50 ರಷ್ಟು ಸಿಬ್ಬಂದಿಯ ಹಾಜರಿಯೊಂದಿಗೆ ಕಾರ್ಯನಿರ್ವಹಿಸಲು ಅನುಮತಿಸಿದೆ. ಆದರೆ, ಗಾರ್ಮೆಂಟ್ ಇಂಡಸ್ಟ್ರೀಗಳು ಶೇ. 30 ರಷ್ಟು ಸಿಬ್ಬಂದಿಯ ಹಾಜರಿಯೊಂದಿಗೆ ಕಾರ್ಯನಿರ್ವಹಿಸಲು ಅನುಮತಿಸಿದೆ.


• ಎಲ್ಲಾ ಅಗತ್ಯ ಅಂಗಡಿಗಳನ್ನು ಈಗಿರುವ ಸಮಯ ಬೆಳಿಗ್ಗೆ 6 ರಿಂದ 10 ಗಂಟೆಯನ್ನು ವಿಸ್ತರಿಸಿ ಮಧ್ಯಾಹ್ನ 2 ಗಂಟೆಯವರೆಗೆ ಅವಕಾಶ ನೀಡಲಾಗಿದೆ.


• ಎಲ್ಲಾ ನಿರ್ಮಾಣ ಚಟುವಟಿಕೆಗಳನ್ನು ಪ್ರಾರಂಭಿಸಲು ಅನುಮತಿಸಲಾಗಿದೆ. ಹಾಗೂ ನಿಮಾಣ ಚಟುವಟಿಕೆ ಸಂಬಂದಿಸಿದ ಅಂಗಡಿಗಳನ್ನು ವಿಶೇಷವಾಗಿ ಸಿಮೆಂಟ್ ಹಾಗೂ ಸ್ಟೀಲ್ ತೆರೆಯಲು ಅವಕಾಶ ನಿಡಲಾಗಿದೆ.


• ಪಾರ್ಕ್ಗಳನ್ನು ಬೆಳಿಗ್ಗೆ 5 ರಿಂದ 10 ಗಂಟೆಯವರೆಗೆ ಅವಕಾಶ ನೀಡಲಾಗಿದೆ.


• ಬೀದಿ ಬದಿ ವ್ಯಾಪಾರಿಗಳು ಬೆಳಿಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ವ್ಯಾಪಾರ ಮಾಡಲು ಅವಕಾಶ ನೀಡಲಾಗಿದೆ.


• ಆಟೋ ಮತ್ತು ಟ್ಯಾಕ್ಸಿಗಳಲ್ಲಿ ಇಬ್ಬರು ಪ್ರಯಾಣಿಕರಿಗೆ ಅವಕಾಶ ನೀಡಲಾಗಿದೆ.


• ಕೋವಿಡ್ ಕರ್ಫ್ಯೂ ರಾತ್ರಿ 7 ಗಂಟೆಯಿಂದ ಬೆಳಿಗ್ಗ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.


• ವಾರಂತ್ಯದ ಕರ್ಫ್ಯೂ ಶುಕ್ರವಾರ ರಾತ್ರಿ 7 ಗಂಟೆಯಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.



>>ಶೇಕಡಾ ಹತ್ತಕ್ಕಿಂತ ಪಾಸಿಟಿವಿಟಿ ದರ ಜಾಸ್ತಿ ಇರುವ ಮೈಸೂರಿನಲ್ಲಿ ಲಾಕ್ ಡೌನ್ ಯಥಾಸ್ಥಿತಿ  ಮುಂದುವರಿಯಲಿದೆ 


ಸೂಚನೆ: ನಮ್ಮ ಆರೋಗ್ಯದ ರಕ್ಷಣೆ ನಮ್ಮ ಹೊಣೆ, ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಅನ್ ಲಾಕ್ ಪ್ರಕ್ರಿಯೆ ಅನಗತ್ಯ ಓಡಾಟಕ್ಕಿರುವ ಅನುಮತಿ ಅಲ್ಲ 
Previous Post Next Post