ಜೂ.17 ರವರೆಗೆ ಕರ್ನಾಟಕದಲ್ಲಿ ಭಾರೀ ಗಾಳಿ – ಮಳೆ, ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ, ಹೈಅಲರ್ಟ್ ಘೋಷಣೆ

ಜೂ.17 ರವರೆಗೆ ಕರ್ನಾಟಕದಲ್ಲಿ ಭಾರೀ ಗಾಳಿ – ಮಳೆ, ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ, ಹೈಅಲರ್ಟ್ ಘೋಷಣೆ 


ರಾಜ್ಯದಲ್ಲಿ ಮುಂಗಾರು ಬಿರುಸುಗೊಂಡಿರುವುದರಿಂದ ಭಾರೀ ಮಳೆಯಾಗುತ್ತಿದ್ದು, ಇದೀಗ ಕರಾವಳಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಜೂನ್ 17 ರವರೆಗೆ ಭಾರೀ ಮಳೆ ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.


ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಭಾರೀ ಮಳೆ ಸುರಿಯಲಿರುವ ಹಿನ್ನೆಲೆಯಲ್ಲಿ ಇಂದು ರೆಡ್ ಅಲರ್ಟ್ ಹಾಗೂ ನಾಳೆಯಿಂದ ಜೂನ್ 17 ರ ವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನ ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಜೂನ್ 16 ಹಾಗೂ 17 ರಂದು ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.


ಕೋವಿಡ್ ಸೋಂಕಿನಿಂದ ಮೃತಪಟ್ಟ ಬಿಪಿಎಲ್ ಕುಟುಂಬಕ್ಕೆ 1ಲಕ್ಷ ಪರಿಹಾರ: ಸಿಎಂ ಬಿಎಸ್ ವೈ ಘೋಷಣೆ


ಬೆಂಗಳೂರು: ಕೊರೋನದಿಂದ ಮೃತಪಟ್ಟವರ ಕುಟುಂಬದದವರಿಗೆ ಒಂದು ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಘೋಷಿಸಿದ್ದಾರೆ.


ನಗರದದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಪಿಎಲ್ ಕಾರ್ಡ್ ಹೊಂದಿದ್ದರೆ ಮಾತ್ರ ಆ ಕುಟುಂಬಕ್ಕೆ ಪರಿಹಾರ ನೀಡಲಾಗುತ್ತದೆ. ಒಂದು ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಪರಿಹಾರ ನೀಡಲಾಗುತ್ತೆ ಎಂದು ಅವರು ತಿಳಿಸಿದ್ದಾರೆ.


ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Previous Post Next Post