ರಾಜ್ಯದಲ್ಲಿ ಕೊವಿಡ್-19 ಹೊಸ ಪ್ರಕರಣಗಳ ಶೇಕಡಾವಾರು ಪ್ರಮಾಣ 1.97%, ಸಾವಿನ ಪ್ರಮಾಣ ಶೇ.3.28%

ರಾಜ್ಯದಲ್ಲಿ ಕೊವಿಡ್-19 ಹೊಸ ಪ್ರಕರಣಗಳ ಶೇಕಡಾವಾರು ಪ್ರಮಾಣ 1.97%, ಸಾವಿನ ಪ್ರಮಾಣ ಶೇ.3.28%


ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಕ್ರಮೇಣ ಇಳಿಮುಖವಾಗುತ್ತಿದೆ. ರಾಜ್ಯದಲ್ಲಿ ಕೊವಿಡ್-19 ಹೊಸ ಪ್ರಕರಣಗಳ ಶೇಕಡಾವಾರು ಪ್ರಮಾಣ 1.97ರಷ್ಟಿದ್ದು, ಸಾವಿನ ಪ್ರಮಾಣ ಶೇ.3.28ರಷ್ಟಿದೆ.


ರಾಜ್ಯದಲ್ಲಿ ಕೊರೊನಾವೈರಸ್ ಸೋಂಕಿತ ಹೊಸ ಪ್ರಕರಣಗಳಿಗಿಂತ ಸಾವಿನ ಸಂಖ್ಯೆ ಏರಿಕೆಯಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 111 ಮಂದಿ ಕೊವಿಡ್-19 ಸೋಂಕಿನಿಂದ ಪ್ರಾಣ ಬಿಟ್ಟಿದ್ದಾರೆ.


ಕಳೆದ 24 ಗಂಟೆಗಳಲ್ಲಿ 3382 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 12763 ಸೋಂಕಿತರು ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ 76,505 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.


ಜಿಲ್ಲಾವಾರು ಪ್ರಕರಣಗಳು ಈ ರೀತಿ ಇದೆ



ಹೆಚ್ಚಿನ ಸುದ್ದಿಗಾಗಿ CLICK HERE


ದಕ ಜಿಲ್ಲೆಯಲ್ಲಿ ಲಾಕ್ ಡೌನ್ ಸಡಿಲಿಕೆ ಬಗ್ಗೆ ನಾಳೆ ಅಧಿಕೃತ ಆದೇಶ: ಸಚಿವ ಕೋಟ


ಬೆಳ್ತಂಗಡಿ, ಜೂ.30: ದ.ಕ. ಜಿಲ್ಲೆಯಲ್ಲಿ ಕೊರೋನ ಪ್ರಕರಣಗಳು ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಲಾಕ್ಡೌನ್ ಸಡಿಲಿಕೆ ಮಾಡುವಂತೆ ಮುಖ್ಯಮಂತ್ರಿಯವರಲ್ಲಿ ವಿನಂತಿಸಲಾಗಿದೆ. ಗುರುವಾರ(ಜು.1) ಈ ಬಗ್ಗೆ ಸರಕಾರದ ಅಧಿಕೃತ ಆದೇಶ ಬರುವ ನಿರೀಕ್ಷೆಯಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.


ಕೊಕ್ಕಡದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಚವರು, ಜಿಲ್ಲೆಯಲ್ಲಿ ಇದೀಗ ಕೊರೋನ ಪಾಸಿಟಿವಿಟಿ ರೇಟ್ ಐದರ ಕೆಳಗೆ ಬಂದಿದೆ. ಈ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಬೆಳಗ್ಗೆ ಏಳು ಗಂಟೆಯಿಂದ ಸಂಜೆ 5 ಗ‌ಂಟೆಯವರೆಗೆ ಅಂಗಡಿಗಳನ್ನು ತೆರೆಯಲು ಹಾಗೂ ಬಸ್ಸುಗಳ ಸಂಚಾರಕ್ಕೆ ಅವಕಾಶ ನೀಡಿ ಲಾಕ್ಡೌನ್ ಸಡಿಲಿಕೆ ಮಾಡಲಾಗುವುದು. ಈ ಬಗ್ಗೆ ಈಗಾಗಲೆ ನಿರ್ಧಾರ ತೆಗೆದುಕೊಳ್ಳಲಾಗಿದ್ದು ಇಂದು ಸಂಜೆ ಅಥವಾ ಗುರುವಾರ ಅಧಿಕೃತ ಆದೇಶ ಹೊರಬೀಳಲಿದೆ ಎಂದು ಅವರು ತಿಳಿಸಿದರು.


ಸೂಚನೆ- ದೇಶದಲ್ಲಿ ಕೊರೋನಾ ಸೋಂಕಿನ ಹಾವಳಿ ಕಡಿಮೆಯಾಗಿದ್ದರೂ ಸಂಪೂರ್ಣವಾಗಿ ನಿಂತಿಲ್ಲ. ಆದ್ದರಿಂದ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಮತ್ತು ಕೊರೋನಾ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ. ಜೊತೆಗೆ ವ್ಯಾಕ್ಸಿನೇಷನ್‌ ಪಡೆಯುವುದನ್ನು ಮರೆಯದಿರಿ. ಇದು ‌'ಈಗಿನ ಸುದ್ದಿ'ಯ ಕಳಕಳಿ

أحدث أقدم