19 ಜಿಲ್ಲೆಗಳಲ್ಲಿ ಇಂದು ರಾತ್ರಿ 7ರಿಂದ ವಾರಾಂತ್ಯ ಕರ್ಫ್ಯೂ ಜಾರಿ, ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ನೈಟ್ ಕರ್ಫ್ಯೂ
ಬೆಂಗಳೂರು : ಕೊರೊನಾ ವೈರಸ್ ನಿಯಂತ್ರಣಕ್ಕೆ ಬೆಂಗಳೂರು ಸೇರಿದಂತೆ 19 ಜಿಲ್ಲೆಗಳಲ್ಲಿ ಇಂದು ರಾತ್ರಿ 7 ರಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ವೀಕೆಂಡ್ ಕರ್ಪ್ಯೂ ಜಾರಿ ಇರಲಿದೆ.ಅಗತ್ಯ ವಸ್ತುಗಳ ಪೂರೈಕೆ ಹಾಗೂ ವೈದ್ಯಕೀಯ ಸೇವಾ ವಲಯ ಸಂಚಾರಕ್ಕೆ ಯಾವುದೇ ಅಡ್ಡಿಯಿಲ್ಲ. ಸಾರ್ವಜನಿಕರ ಅನಗತ್ಯ ಓಡಾಟಕ್ಕೆ ಕಟ್ಟುನಿಟ್ಟಿನ ನಿಷೇಧ ಹೇರಲಾಗಿದೆ. ಕಳೆದ 14 ನೇ ತಾರೀಕು ಜಾರಿಗೆ ಬಂದ ಅನ್ ಲಾಕ್ 1.O ಇರುವ 19 ಜಿಲ್ಲೆಗಳಲ್ಲಿ ಇಂದು ರಾತ್ರಿಯಿಂದ ವಾರಾಂತ್ಯದ ಕರ್ಫ್ಯೂ ಇರಲಿದೆ. ಇತರ 11 ಜಿಲ್ಲೆಗಳಲ್ಲಿ ಹಳೆಯ ಮಾರ್ಗಸೂಚಿ ಪ್ರಕಾರ ಲಾಕ್ ಡೌನ್ ಚಾಲ್ತಿಯಲ್ಲಿದೆ.
ಸೋಮವಾರದಿಂದ ಅನ್ ಲಾಕ್ 2.O ??
ಸೋಮವಾರದಿಂದ ಅನ್ ಲಾಕ್ 2.O, ನಾಳೆ ನಡೆಯುವ ಸಭೆಯಲ್ಲಿ ತೀರ್ಮಾನ ಸಾಧ್ಯತೆ, ಮುಖ್ಯಮಂತ್ರಿ ಯಡಿಯೂರಪ್ಪ ಸೂಚನೆ