ಹನ್ನೊಂದು ಜಿಲ್ಲೆಗಳಲ್ಲಿ ಜೂನ್ 21ರ ವರೆಗೆ ಲಾಕ್ ಡೌನ್ ಮುಂದುವರಿಕೆ, ಉಳಿದ ಜಿಲ್ಲೆಗಳಲ್ಲಿ ನಿಯಮ ಸಡಿಲಿಕೆ, ಸೆಮಿ ಲಾಕ್ ಡೌನ್, ಸಮಯ ವಿಸ್ತರಣೆ
ಬೆಂಗಳೂರು: ಕೋವಿಡ್-19 ತಡೆಗಟ್ಟುವ ನಿಟ್ಟಿನಲ್ಲಿ ತಾಂತ್ರಿಕ ಸಲಹಾ ಸಮಿತಿಯ ಸಲಹೆಗಳ ಮೇರೆಗೆ ಈಗಿರುವ ನಿರ್ಬಂಧಗಳಲ್ಲಿ ಕೆಲವು ಮಾರ್ಪಾಡುಗಳನ್ನು/ಸಡಿಲಿಕೆಗಳನ್ನು ಮಾಡಲು ಇಂದಿನ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
- ರಾಜ್ಯದಲ್ಲಿ Positivity Rate ಹೆಚ್ಚಿರುವ ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಮೈಸೂರು, ಚಾಮರಾಜನಗರ, ಹಾಸನ, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಮಂಡ್ಯ ಬೆಳಗಾವಿ ಹಾಗೂ ಕೊಡಗು ಜಿಲ್ಲೆಗಳಿಗೆ ಅನ್ವಯವಾಗುವಂತೆ ಈಗಿರುವ ಮಾರ್ಗಸೂಚಿಗಳಲ್ಲಿ ಯಾವುದೇ ರೀತಿಯ ಬದಲಾವಣೆ ಇರುವುದಿಲ್ಲ, ಅಂದರೆ ಈ ಜಿಲ್ಲೆಗಳಲ್ಲಿ ಯಥಾಸ್ಥಿತಿ ಮುಂದುವರೆಯುತ್ತದೆ. ಹಾಗೂ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಉಸ್ತುವಾರಿ ಸಚಿವರುಗಳೊಂದಿಗೆ ಸಮಾಲೋಚಿಸಿ ಇನ್ನೂ ಹೆಚ್ಚಿನ ಕಠಿಣ ಕ್ರಮಗಳನ್ನು ಕೈಗೊಳ್ಳಲು ಅಧಿಕಾರ ನೀಡಲಾಗಿದೆ.
- ಉಳಿದ ಎಲ್ಲಾ ಜಿಲ್ಲೆಗಳಲ್ಲಿ ಈಗಾಗಲೇ ಸರ್ಕಾರವು ಹೊರಡಿಸಿರುವ ಮಾರ್ಗಸೂಚಿಗಳಲ್ಲಿ ಈ ಕೆಳಕಂಡ ಸಡಿಲಿಕೆಗಳೊಂದಿಗೆ ದಿನಾಂಕ: 14-06-2021 ರ ಬೆಳಿಗ್ಗೆ 6 ಗಂಟೆಯಿಂದ ದಿನಾಂಕ: 21-06-2021 ಬೆಳಿಗ್ಗೆ 6 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.
- ಎಲ್ಲಾ ಕಾರ್ಖಾನೆಗಳನ್ನು ಶೇ. 50 ರಷ್ಟು ಸಿಬ್ಬಂದಿಯ ಹಾಜರಿಯೊಂದಿಗೆ ಕಾರ್ಯನಿರ್ವಹಿಸಲು ಅನುಮತಿಸಿದೆ. ಆದರೆ, ಗಾರ್ಮೆಂಟ್ ಇಂಡಸ್ಟ್ರೀಗಳು ಶೇ. 30 ರಷ್ಟು ಸಿಬ್ಬಂದಿಯ ಹಾಜರಿಯೊಂದಿಗೆ ಕಾರ್ಯನಿರ್ವಹಿಸಲು ಅನುಮತಿಸಿದೆ.
- ಎಲ್ಲಾ ಅಗತ್ಯ ಅಂಗಡಿಗಳನ್ನು ಈಗಿರುವ ಸಮಯ ಬೆಳಿಗ್ಗೆ 6 ರಿಂದ 10 ಗಂಟೆಯನ್ನು ವಿಸ್ತರಿಸಿ ಮಧ್ಯಾಹ್ನ 2 ಗಂಟೆಯವರೆಗೆ ಅವಕಾಶ ನೀಡಲಾಗಿದೆ.
- ಎಲ್ಲಾ ನಿರ್ಮಾಣ ಚಟುವಟಿಕೆಗಳನ್ನು ಪ್ರಾರಂಭಿಸಲು ಅನುಮತಿಸಲಾಗಿದೆ. ಹಾಗೂ ನಿಮಾಣ ಚಟುವಟಿಕೆ ಸಂಬAದಿಸಿದ ಅಂಗಡಿಗಳನ್ನು ವಿಶೇಷವಾಗಿ ಸಿಮೆಂಟ್ ಹಾಗೂ ಸ್ಟೀಲ್ ತೆರೆಯಲು ಅವಕಾಶ ನಿಡಲಾಗಿದೆ.
- ಪಾರ್ಕ್ಗಳನ್ನು ಬೆಳಿಗ್ಗೆ 5 ರಿಂದ 10 ಗಂಟೆಯವರೆಗೆ ಅವಕಾಶ ನೀಡಲಾಗಿದೆ.
- ಬೀದಿ ಬದಿ ವ್ಯಾಪಾರಿಗಳು ಬೆಳಿಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ವ್ಯಾಪಾರ ಮಾಡಲು ಅವಕಾಶ ನೀಡಲಾಗಿದೆ.
- ಆಟೋ ಮತ್ತು ಟ್ಯಾಕ್ಸಿಗಳಲ್ಲಿ ಇಬ್ಬರು ಪ್ರಯಾಣಿಕರಿಗೆ ಅವಕಾಶ ನೀಡಲಾಗಿದೆ.
- ಕೋವಿಡ್ ಕರ್ಫ್ಯೂ ರಾತ್ರಿ 7 ಗಂಟೆಯಿAದ ಬೆಳಿಗ್ಗ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.
- ವಾರಂತ್ಯದ ಕರ್ಫ್ಯೂ ಶುಕ್ರವಾರ ರಾತ್ರಿ 7 ಗಂಟೆಯಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.
- ಉಳಿದಂತೆ ವಿವರವಾದ ಮಾರ್ಗಸೂಚಿಗಳನ್ನು ಪ್ರತ್ಯೇಕವಾಗಿ ಹೊರಡಿಸಲಾಗುವುದು