ದೇಶಾದ್ಯಂತ ಮತ್ತೆ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆ, ಕಳೆದ 24 ಗಂಟೆಯಲ್ಲಿ ಹೊಸದಾಗಿ 1,00,636 ಪಾಸಿಟಿವ್, 1,74,399 ಸೋಂಕಿತರು ಗುಣಮುಖರು

ದೇಶಾದ್ಯಂತ ಮತ್ತೆ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆ, ಕಳೆದ 24 ಗಂಟೆಯಲ್ಲಿ ಹೊಸದಾಗಿ 1,00,636 ಪಾಸಿಟಿವ್, 1,74,399 ಸೋಂಕಿತರು ಗುಣಮುಖರು

ನವದೆಹಲಿ : ದೇಶಾದ್ಯಂತ ಕೊರೋನಾ ಸೋಂಕಿನ ಪ್ರಕರಣಗಳ ಸಂಖ್ಯೆ ಇಳಿಕೆ ಕಂಡಿದೆ. ಕಳೆದ 24 ಗಂಟೆಯಲ್ಲಿ ಹೊಸದಾಗಿ ದೇಶಾದ್ಯಂತ 1,00,636 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಅಲ್ಲದೇ ಸೋಂಕಿತರಾದಂತ 2,427 ಜನರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ಕಳೆದ 24 ಗಂಟೆಯಲ್ಲಿ 1,74,399 ಸೋಂಕಿತರು ಗುಣಮುಖರಾಗಿದ್ದಾರೆ. ಇದರಿಂದಾಗಿ ದೇಶದಲ್ಲಿ 14,01,609 ಸಕ್ರೀಯ ಸೋಂಕಿತರಿದ್ದಾರೆ ಎಂಬುದಾಗಿ ಆರೋಗ್ಯ ಇಲಾಖೆ ತಿಳಿಸಿದೆ.

ಸೂಚನೆ: ಮನೆಯಲ್ಲಿರಿ ಆರೋಗ್ಯವಾಗಿರಿ, ಅಗತ್ಯಕ್ಕಾಗಿ ಹೊರಬಂದರೆ ಅಂತರ ಕಾಪಾಡಿ, ಮಾಸ್ಕ್ ಧರಿಸಿ, ಕೊರೋನ ನಿಮ್ಮ ಹತ್ತಿರವೂ ಸುಳಿಯದು 
Previous Post Next Post