ದೇಶದಲ್ಲಿ ಕೊರೋಣ ಇಳಿಕೆ, ಕಳೆದ 24 ಗಂಟೆಯಲ್ಲಿ 1,14,460 ಸೋಂಕು ದೃಢ, 1,89,232 ಗುಣಮುಖ,

ದೇಶದಲ್ಲಿ ಕಳೆದ 24 ಗಂಟೆಯಲ್ಲಿ  1,14,460 ಸೋಂಕು ದೃಢ, 1,89,232 ಗುಣಮುಖದೇಶಾದ್ಯಂತ ಕೊರೋನಾ ಸೋಂಕಿನ ಪ್ರಕರಣಗಳ ಸಂಖ್ಯೆ ಇಳಿಕೆ ಕಂಡಿದೆ. ಕಳೆದ 24 ಗಂಟೆಯಲ್ಲಿ ಹೊಸದಾಗಿ ದೇಶಾದ್ಯಂತ 1,14,460 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಅಲ್ಲದೇ ಸೋಂಕಿತರಾದಂತ 2,677 ಜನರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.


ಕಳೆದ 24 ಗಂಟೆಯಲ್ಲಿ 1,89,232 ಸೋಂಕಿತರು ಗುಣಮುಖರಾಗಿದ್ದಾರೆ.  ಇದುವರೆಗೆ 2,69,84,781 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರಿಂದಾಗಿ ದೇಶದಲ್ಲಿ 14,77,799 ಸಕ್ರೀಯ ಸೋಂಕಿತರಿದ್ದಾರೆ ಎಂಬುದಾಗಿ ಆರೋಗ್ಯ ಇಲಾಖೆ ತಿಳಿಸಿದೆ.


ಹೈಕಮಾಂಡ್ ಸೂಚಿಸಿದ ತಕ್ಷಣ ರಾಜಿನಾಮೆ ಎಂದ ಸಿಎಂ ಬಿಎಸ್ವೈ

ನಾಯಕತ್ವ ಬದಲಾವಣೆಗೆ ತೆರೆ ಮರೆಯಲ್ಲಿ ಕಸರತ್ತು ನಡೆಸುತ್ತಿರುವ ಸಚಿವರು-ಶಾಸಕರಿಗೆ ಖಡಕ್ ಸಂದೇಶ 


ಬೆಂಗಳೂರು: ನಾಯಕತ್ವ ಬದಲಾವಣೆ ವಿಚಾರ, ಬಿಜೆಪಿಯಲ್ಲಿನ ಅಸಮಾಧಾನದ ಬೆನ್ನಲ್ಲೇ ಖಡಕ್ ಪ್ರತಿಕ್ರಿಯೆ ನೀಡಿರುವ ಸಿಎಂ ಬಿ.ಎಸ್.ಯಡಿಯೂರಪ್ಪ ಹೈಕಮಾಂಡ್ ಸೂಚಿಸಿದ ತಕ್ಷಣ ರಾಜೀನಾಮೆ ನೀಡುತ್ತೇನೆ ಎಂದು ಹೇಳಿದ್ದಾರೆ.


ವಿಧಾನಸೌದದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ಬಿಜೆಪಿ ಹೈಕಮಾಂಡ್ ನನ್ನ ಮೇಲೆ ಸಂಪೂರ್ಣ ವಿಶ್ವಾಸವಿಟ್ಟಿದೆ. ಎಲ್ಲಿಯವರೆಗೆ ಅಧಿಕಾರದಲ್ಲಿರಲು ಹೇಳುತ್ತಾರೋ ಅಲ್ಲಿಯವರೆಗೂ ನಾನು ಅಧಿಕಾರದಲ್ಲಿ ಮುಂದುವರೆಯುತ್ತೇನೆ. ಹೈಕಮಾಂಡ್ ರಾಜೀನಾಮೆ ನೀಡುವಂತೆ ನನಗೆ ಸೂಚಿಸಿದರೆ ತಕ್ಷಣ ರಾಜೀನಾಮೆ ನೀಡುತ್ತೇನೆ ಎಂದು ಹೇಳಿದ್ದಾರೆ.

ಈ ಮೂಲಕ ನಾಯಕತ್ವ ಬದಲಾವಣೆ ನಿಟ್ಟಿನಲ್ಲಿ ತೆರೆ ಮರೆಯಲ್ಲಿ ಕೆಲ ಸಚಿವರು-ಶಾಸಕರು ನಡೆಸುತ್ತಿದ್ದ ಯತ್ನಕ್ಕೆ ಹಾಗೂ ನಾಯಕರ ಅನಗತ್ಯ ಹೇಳಿಕೆಗಳಿಗೆ ಖಡಕ್ ಸಂದೇಶ ರವಾನಿಸಿದ್ದಾರೆ.


#ಮನೆಯಲ್ಲಿರಿ ಆರೋಗ್ಯವಾಗಿರಿ 

Previous Post Next Post