ದೇಶದಲ್ಲಿ ಕೊರೊನ ಇಳಿಮುಖ, ಕಳೆದ 24 ಗಂಟೆಯಲ್ಲಿ 37,566 ಜನರಿಗೆ ಸೋಂಕು ದೃಡ, ಸಕ್ರಿಯ ಪ್ರಕರಣಗಳು 5,52,659
ನವದೆಹಲಿ: ದೇಶದಲ್ಲಿ ಕೊರೋನಾ ಭಾರೀ ಇಳಿಕೆಯಾಗಿದ್ದು, ಕಳೆದ 24 ಗಂಟೆ ಅವಧಿಯಲ್ಲಿ ಹೊಸದಾಗಿ 37,566 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. 56,994 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 907 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮಂತ್ರಾಲಯ ಮಾಹಿತಿ ನೀಡಿದೆ.
ಒಟ್ಟು ಪ್ರಕರಣಗಳ ಸಂಖ್ಯೆ 3,03,16,897
ಇದುವರೆಗೆ ಗುಣಮುಖರಾದವರು 2,93,66,601
ದೇಶದಲ್ಲಿರುವ ಸಕ್ರಿಯ ಪ್ರಕರಣಗಳು 5,52,659
ಇದುವರೆಗೆ ಮೃತಪಟ್ಟವರು 3,97,637
ರಾಷ್ಟ್ರೀಯ ಚೇತರಿಕೆ ಪ್ರಮಾಣ ಶೇ.96.87ಕ್ಕೆ ಏರಿಕೆಯಾಗಿರುವುದರಿಂದ ಸಕ್ರಿಯ ಸೋಂಕು ಪ್ರಕರಣಗಳ ಸಂಖ್ಯೆ 5.52ಲಕ್ಷಕ್ಕೆ ಕುಸಿದಿದೆ. ಇದುವರೆಗೂ ಸುಮಾರು 33 ಕೋಟಿ ಮಂದಿಗೆ ವ್ಯಾಕ್ಸಿನ್ ಹಾಕಲಾಗಿದೆ.
ಸೂಚನೆ- ದೇಶದಲ್ಲಿ ಕೊರೋನಾ ಸೋಂಕಿನ ಹಾವಳಿ ಕಡಿಮೆಯಾಗಿದ್ದರೂ ಸಂಪೂರ್ಣವಾಗಿ ನಿಂತಿಲ್ಲ. ಆದ್ದರಿಂದ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಮತ್ತು ಕೊರೋನಾ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ. ಜೊತೆಗೆ ವ್ಯಾಕ್ಸಿನೇಷನ್ ಪಡೆಯುವುದನ್ನು ಮರೆಯದಿರಿ. ಇದು 'ಈಗಿನ ಸುದ್ದಿ'ಯ ಕಳಕಳಿ