ಕಳೆದ 24 ಗಂಟೆಯಲ್ಲಿ ದೇಶದಲ್ಲಿ 53,256 ಹೊಸ ಸೋಂಕು ಪ್ರಕರಣಗಳು ಪತ್ತೆ, ದೇಶಾದ್ಯಂತ 78,190 ಮಂದಿ ಸೋಂಕಿತರು ಗುಣಮುಖರು, ದೇಶದಲ್ಲಿರುವ ಸಕ್ರಿಯ ಪ್ರಕರಣಗಳು 7,02,887

ಕಳೆದ 24 ಗಂಟೆಯಲ್ಲಿ ದೇಶದಲ್ಲಿ 53,256 ಹೊಸ ಸೋಂಕು ಪ್ರಕರಣಗಳು ಪತ್ತೆ, ದೇಶಾದ್ಯಂತ 78,190 ಮಂದಿ ಸೋಂಕಿತರು ಗುಣಮುಖರು, ದೇಶದಲ್ಲಿರುವ ಸಕ್ರಿಯ ಪ್ರಕರಣಗಳು 7,02,887ನವದೆಹಲಿ: ದೇಶಾದ್ಯಂತ ಕೊರೋನಾ ಸೋಂಕು ಸಾಂಕ್ರಾಮಿಕ ಅಬ್ಬರ ಮತ್ತೆ ಇಳಿಕೆಯಾಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 53,256 ಹೊಸ ಸೋಂಕು ಪ್ರಕರಣಗಳು ವರದಿಯಾಗಿದೆ. ಇದು ಕಳೆದ 88 ದಿನಗಳಲ್ಲೇ ಕನಿಷ್ಠ ಪ್ರಮಾಣದ್ದಾಗಿದೆ.


ಈ ಕುರಿತಂತೆ ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 53,256 ಹೊಸ ಸೋಂಕು ಪ್ರಕರಣ ವರದಿಯಾಗಿದ್ದು, ಅಂತೆಯೇ ನಿನ್ನೆ 1,422 ಸೋಂಕಿತರು ಸಾವನ್ನಪ್ಪಿದ್ದಾರೆ. 


ಇನ್ನು ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 78,190 ಮಂದಿ ಸೋಂಕಿತರು ಗುಣಮುಖರಾಗಿದ್ದು ಪ್ರಸ್ತುತ ದೇಶದಲ್ಲಿ 7,02,887 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.


Click here  ಹೆಚ್ಚಿನ ಸುದ್ದಿ ಓದಿ


🔥ಸೂಚನೆ: ಮಹಾಮಾರಿಯ ಕೊಂಡಿ ಕಳಚೋಣ, ಮಾಸ್ಕ್ ಧರಿಸಿ, ಅಂತರ ಕಾಪಾಡಿ

Previous Post Next Post