ಕಳೆದ 24 ಗಂಟೆಯಲ್ಲಿ ದೇಶದಲ್ಲಿ 62,480 ಸೋಂಕು ದೃಢ, 88,977 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್
ನವದೆಹಲಿ: ದೇಶದಾದ್ಯಂತ ಕೊರೊನಾ ಸೋಂಕು ಹರಡುವಿಕೆಯಲ್ಲಿ ಇಳಿಕೆ ಕಂಡಿದ್ದು, ಕಳೆದ 24 ಗಂಟೆಯಲ್ಲಿ 62,480 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಒಂದೇ ದಿನ 1,587 ಸೋಂಕಿತರು ಸಾವನ್ನಪ್ಪಿದ್ದು, 88,977 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಇನ್ನು ದೇಶದಲ್ಲಿ ಈವೆರೆಗೆ ಒಟ್ಟು 2,97,62,793 ಜನರಿಗೆ ಕೊರೊನಾ ಸೋಂಕು ತಗಲಿದ್ದು, ಈ ಪೈಕಿ 3,83,490 ಮಂದಿ ಸಾವನ್ನಪ್ಪಿದ್ದಾರೆ. 2,85,80,647 ಮಂದಿ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿದ್ದಾರೆ. ಸದ್ಯ ದೇಶದಲ್ಲಿ 7,98,656 ಸಕ್ರೀಯ ಪ್ರಕರಣಗಳಿವೆ.
🔥ಸೂಚನೆ: ಕೊರೊನ ಗೆಲ್ಲೋಣ, ಮಾಸ್ಕ್ ಧರಿಸಿ, ಅಂತರ ಕಾಪಾಡಿ