ಕಳೆದ 24 ಗಂಟೆಯಲ್ಲಿ ದೇಶದಲ್ಲಿ 80,834 ಹೊಸ ಕೋವಿಡ್ ಪ್ರಕರಣಗಳು ಪತ್ತೆ, 1,32,062 ಮಂದಿ ಸೋಂಕಿತರು ಗುಣಮುಖರು, ಇಳಿಕೆಯಾಗುತ್ತಿರುವ ಸಕ್ರಿಯ ಪ್ರಕರಣಗಳು

ಕಳೆದ 24 ಗಂಟೆಯಲ್ಲಿ ದೇಶದಲ್ಲಿ 80,834 ಹೊಸ ಕೋವಿಡ್ ಪ್ರಕರಣಗಳು ಪತ್ತೆ, 1,32,062 ಮಂದಿ ಸೋಂಕಿತರು ಗುಣಮುಖರು, ಇಳಿಕೆಯಾಗುತ್ತಿರುವ ಸಕ್ರಿಯ ಪ್ರಕರಣಗಳು 


ಹೊಸದಿಲ್ಲಿ: ದೇಶದಲ್ಲಿ ಕೋವಿಡ್ 19 ಸೋಂಕು ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿದೆ. ಹೊಸ ಸೋಂಕು ಪ್ರಕರಣಗಳು ಕಡಿಮೆಯಾಗುತ್ತಿದ್ದಂತೆ ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲೂ ಇಳಿಕೆಯಾಗುತ್ತಿದೆ.


ಕಳೆದ 24 ಗಂಟೆಯಲ್ಲಿ ದೇಶದಲ್ಲಿ 80,834 ಹೊಸ ಕೋವಿಡ್ ಪ್ರಕರಣಗಳು ಕಂಡು ಬಂದಿದೆ. ಈ ಅವಧಿಯಲ್ಲಿ 3,303 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.


ತಮಿಳುನಾಡು ರಾಜ್ಯದಲ್ಲಿ 15,108 ಪ್ರಕರಣಗಳು ಕಂಡು ಬಂದಿದೆ. ಉಳಿದಂತೆ ಕೇರಳದಲ್ಲಿ 13,832 ಪ್ರಕರಣಗಳು, ಮಹಾರಾಷ್ಟ್ರದಲ್ಲಿ 10,697 ಪ್ರಕರಣಗಳು, ಕರ್ನಾಟಕದಲ್ಲಿ 9,785 ಪ್ರಕರಣಗಳು ಮತ್ತು ಆಂಧ್ರಪ್ರದೇಶದಲ್ಲಿ 6952 ಹೊಸ ಪ್ರಕರಣಗಳು ಪತ್ತೆಯಾಗಿದೆ. ದೇಶದಲ್ಲಿ ಪತ್ತೆಯಾದ ಒಟ್ಟು ಪ್ರಕರಣಗಳ ಪೈಕಿ 69.74% ಪ್ರಕರಣಗಳು ಈ ಐದು ರಾಜ್ಯಗಳಲ್ಲೇ ಕಂಡುಬಂದಿದೆ.


ದೇಶದಲ್ಲಿ ಸದ್ಯ 10,26,159 ಸಕ್ರಿಯ ಪ್ರಕರಣಗಳಿವೆ. ಕಳೆದ 24 ಗಂಟೆ ಅವಧಿಯಲ್ಲಿ 1,32,062 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ.


ಸೂಚನೆ: ಮನೆಯಲ್ಲಿರಿ ಆರೋಗ್ಯವಾಗಿರಿ, ಅಗತ್ಯಕ್ಕಾಗಿ ಹೊರಬಂದರೆ ಅಂತರ ಕಾಪಾಡಿ ಮಾಸ್ಕ್ ಧರಿಸಿ

Previous Post Next Post