ಕೊರೊನ ಕರ್ಫ್ಯೂ: ಅನ್ ಲಾಕ್ 2.O ಬಗ್ಗೆ ಇಂದು ರಾಜ್ಯ ಸರಕಾರ ನಿರ್ಧಾರ
ಬೆಂಗಳೂರು: ರಾಜ್ಯದಲ್ಲಿ ಕೊರೊನಾ 2ನೇ ಅಲೆ ಆರ್ಭಟ ಕೊಂಚ ಇಳಿಮುಖವಾಗಿದ್ದು, ಅನ್ ಲಾಕ್ 2.0 ಬಗ್ಗೆ ಶನಿವಾರ ಸಂಜೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿದುಬಂದಿದೆ.
ನಿನ್ನೆಯಷ್ಟೇ ಸುದ್ದಿಗಾರರೊಂದಿಗೆ ಮಾತನಾಡಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಎರಡನೇ ಹಂತದ ಲಾಕ್ ಡೌನ್ ಸಡಿಲಿಕೆ ಬಗ್ಗೆ ಶನಿವಾರ ಸಂಜೆ ನಡೆಯಲಿರುವ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುವುದು. ಕೊರೊನಾ ಮೂರನೇ ಅಲೆ ಭೀತಿ ಕೂಡ ಎದುರಾಗಿದೆ. ಈ ನಿಟ್ಟಿನಲ್ಲಿಯೂ ಎಚ್ಚರಿಕೆ ಕೈಗೊಳ್ಳುವ ಅಗತ್ಯವಿದೆ. ಇದರ ನಡುವೆ ಎರಡನೇ ಹಂತದ ಅನ್ ಲಾಕ್ ನಲ್ಲಿ ಯಾವುದಕ್ಕೆಲ್ಲ ವಿನಾಯಿತಿ ನೀಡಬೇಕು ಎಂಬ ಬಗ್ಗೆಯೂ ಚರ್ಚೆ ನಡೆಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಮುಖ್ಯಮಂತ್ರಿಗಳು ಇಂದು ಸಂಜೆ ಸಚಿವರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದು, ಈ ವೇಳೆ ಕೋವಿಡ್ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆಯಲಿದ್ದಾರೆ. ಬಳಿಕ ತಾಂತ್ರಿಕ ಸಲಹಾ ಸಮಿತಿ ನೀಡಿರುವ ಸಲಹೆಗಳನ್ನು ಪರಿಗಣಿಸಿ ನಿರ್ಧಾರ ಕೈಗೊಳ್ಳುವ ಸಾಧ್ಯತೆಗಳಿವೆ.