ರಾಜ್ಯದಲ್ಲಿ ಕೊರೊನ ಇಳಿಕೆ, ಇಂದು 3,310 ಪಾಸಿಟಿವ್, 6,524 ಡಿಸ್ಚಾರ್ಜ್, ಪಾಸಿಟಿವಿಟಿ ದರ 2.09%ಕ್ಕೆ ಕುಸಿತ

ರಾಜ್ಯದಲ್ಲಿ ಕೊರೊನ ಇಳಿಕೆ, ಇಂದು 3,310 ಪಾಸಿಟಿವ್, 6,524 ಡಿಸ್ಚಾರ್ಜ್, ಪಾಸಿಟಿವಿಟಿ ದರ 2.09%ಕ್ಕೆ ಕುಸಿತ


ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದ್ದು ಇಂದು 3,310 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಕಳೆದ 24 ಗಂಟೆಯಲ್ಲಿ ಮಹಾಮಾರಿಗೆ 114 ಮಂದಿ ಬಲಿಯಾಗಿದ್ದಾರೆ. 


ರಾಜ್ಯದಲ್ಲಿ ಇಂದು ಸಹ ಹೊಸ ಪಾಸಿಟಿವ್ ಪ್ರಕರಣಗಳಿಗಿಂತ ಹೆಚ್ಚು ಅಂದರೆ 6,524 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು 1,07,195 ಸಕ್ರೀಯ ಪ್ರಕರಣಗಳಿವೆ. ರಾಜ್ಯದಲ್ಲಿ ಪಾಸಿಟಿವಿಟಿ ದರ 2.09%ಕ್ಕೆ ಕುಸಿದಿದೆ. 


ಜಿಲ್ಲಾವಾರು ಪ್ರಕರಣಗಳ ಸಂಖ್ಯೆ :

ಬಾಗಲಕೋಟೆ-08, ಬಳ್ಳಾರಿ-29, ಬೆಳಗಾವಿ-87, ಬೆಂಗಳೂರು ಗ್ರಾಮಾಂತರ-80, ಬೆಂಗಳೂರು ನಗರ-614, ಬೀದರ್-06, ಚಾಮರಾಜನಗರ-71, ಚಿಕ್ಕಬಳ್ಳಾಪುರ-47, ಚಿಕ್ಕಮಗಳೂರು-39, ಚಿತ್ರದುರ್ಗ-13,ದಕ್ಷಿಣ ಕನ್ನಡ-377, ದಾವಣಗೆರೆ-89, ಧಾರವಾಡ-34, ಗದಗ-23, ಹಾಸನ-399, ಹಾವೇರಿ-29. ಕಲಬುರಗಿ-14, ಕೊಡಗು-183, ಕೋಲಾರ-140, ಕೊಪ್ಪಳ-21, ಮಂಡ್ಯ-119, ಮೈಸೂರು-367, ರಾಯಚೂರು-14, ರಾಮನಗರ-11, ಶಿವಮೊಗ್ಗ-212, ತುಮಕೂರು-80, ಉಡುಪಿ-92, ಉತ್ತರ ಕನ್ನಡ-99, ವಿಜಯಪುರ-08, ಯಾದಗಿರಿ-05.


ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಜಾರಿ, ಸೋಮವಾರ ಬೆಳಿಗ್ಗೆ 5 ರ ವರೆಗೆ ವಾರಾಂತ್ಯದ ಕರ್ಫ್ಯೂಬೆಂಗಳೂರು : ಕೊರೊನಾ ವೈರಸ್ ನಿಯಂತ್ರಣಕ್ಕೆ ರಾಜ್ಯದಲ್ಲಿ ಇದೀಗ ರಾತ್ರಿ 7 ರಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ವೀಕೆಂಡ್ ಕರ್ಪ್ಯೂ ಜಾರಿ ಇರಲಿದೆ.


ಜೂನ್ 21 ರ ಬಳಿಕ ಸರ್ಕಾರ ಲಾಕ್ ಡೌನ್ ನಿಯಮಾವಳಿಗಳಲ್ಲಿ ಹಲವು ಸಡಿಲಿಕೆ ಮಾಡಿದರೂ ಕೂಡ ವಾರಾಂತ್ಯ ಕರ್ಪ್ಯೂ ಹಾಗೂ ರಾತ್ರಿ ಕರ್ಪ್ಯೂ ಜಾರಿಯಲ್ಲಿರುತ್ತದೆ. ಕೊರೊನಾ ವೈರಸ್ ಹರಡುವಿಕೆ ತಟೆಗಟ್ಟುವಿಕೆ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.


ಮೈಸೂರು ಜನರಿಗೆ ಕೊಂಚ ರಿಲಾಕ್ಸ್, ಲಾಕ್ ಡೌನ್ ನಿಯಮಗಳಲ್ಲಿ ಸಡಿಲಿಕೆಮೈಸೂರು: ಕೋವಿಡ್ ಸೋಂಕಿನ ಪ್ರಮಾಣ ಕಡಿಮೆಯಾದ ಹಿನ್ನೆಲೆ ಸಾಂಸ್ಕೃತಿಕ ನಗರಿ ಮೈಸೂರಿನ ಜನತೆಗೆ ಕೊಂಚ ರಿಲ್ಯಾಕ್ಸ್ ದೊರೆತಿದೆ. ಮೈಸೂರಿನಲ್ಲಿ ಲಾಕ್ಡೌನ್ ನಲ್ಲಿ ಸಡಿಲಿಕೆ ಮಾಡಲಾಗಿದ್ದು, ನೂತನ ನಿಯಮಗಳು ನಾಳೆಯಿಂದಲೇ ಜಾರಿಗೆ ಬರಲಿದೆ.

ಈ ಸಂಬಂಧ ಇಂದು ( ಜೂನ್ 25) ಸುದ್ಧಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಮೈಸೂರು ಜಿಲ್ಲಾಧಿಕಾರಿ ಬಗಾದಿ ಗೌತಮ್, ಮೈಸೂರು ಜಿಲ್ಲೆಯನ್ನು ಸರ್ಕಾರ ಕೆಟಗಿರಿ 3ರಿಂದ ಮೇಲ್ಸರ್ಜೆಗೇರಿಸಿ 2ಕ್ಕೆ ಸೇರಿಸಿದೆ. ಇದರ ಪರಿಣಾಮ ಅನ್ ಲಾಕ್ 1 ರಂತೆ ಕೆಟಗಿರಿ 2ಕ್ಕೆ ಅನ್ವಯಿಸಿರುವ ನೀತಿ ನಿಯಮಗಳು ಜಾರಿಯಾಗಲಿದೆ. ಶೇ 10ಕ್ಕಿಂತ ಜಾಸ್ತಿ ಇದ್ದ ಪಾಸಿಟಿವಿಟಿ ದರ ಶೇ5-10ರೊಳಗೆ ಬಂದಿದೆ. ಇನ್ನು ಸಂಜೆ 7 ಘಂಟೆಯಿಂದ ಬೆಳಿಗ್ಗೆ 6 ರವೆರೆಗೆ ನೈಟ್ ಕರ್ಪ್ಯೂ ಜಾರಿಯಲ್ಲಿರುತ್ತದೆ ವೀಕೆಂಡ್ ಕರ್ಫ್ಯೂ ಯಥಾಸ್ಥಿತಿ ಮುಂದುವರೆಯಲಿದೆ ಎಂದು ಡಿಸಿ ಬಗಾದಿ ಗೌತಮ್ ತಿಳಿಸಿದರು.


ಸೂಚನೆ- ದೇಶದಲ್ಲಿ ಕೊರೋನಾ ಸೋಂಕಿನ ಹಾವಳಿ ಕಡಿಮೆಯಾಗಿದ್ದರೂ ಸಂಪೂರ್ಣವಾಗಿ ನಿಂತಿಲ್ಲ. ಆದ್ದರಿಂದ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಮತ್ತು ಕೊರೋನಾ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ. ಇದು ಈಗಿನ ಸುದ್ದಿಯ ಕಳಕಳಿ.


ಹೆಚ್ಚಿನ ಸುದ್ದಿಗಾಗಿ ಕ್ಲಿಕ್ ಮಾಡಿ

Previous Post Next Post