ಈ 8 ಜಿಲ್ಲೆಗಳಲ್ಲಿ ಲಾಕ್ ಡೌನ್ ಮತ್ತೆ ಒಂದು ವಾರ ಮುಂದುವರಿಕೆ?? ಅನ್ ಲಾಕ್ ಹೇಗೆ?? ಸಂಜೆ ಅಧಿಕೃತ ಆದೇಶ ಪ್ರಕಟ, ಹೊಸ ಮಾರ್ಗಸೂಚಿ ಪ್ರಕಟ ಸಾದ್ಯತೆ

ಈ 8 ಜಿಲ್ಲೆಗಳಲ್ಲಿ ಲಾಕ್ ಡೌನ್ ಮತ್ತೆ ಒಂದು ಮುಂದುವರಿಕೆ?? ಅನ್ ಲಾಕ್ ಹೇಗೆ?? ಸಂಜೆ ಅಧಿಕೃತ ಆದೇಶ ಪ್ರಕಟ, ಹೊಸ ಮಾರ್ಗಸೂಚಿ ಪ್ರಕಟ ಸಾದ್ಯತೆ ಕೊರೊನಾ ಸೋಂಕು ಪ್ರಮಾಣ ಶೇ.10ಕ್ಕಿಂತ ಕಡಿಮೆ ಬಾರದ ರಾಜ್ಯದ 8 ಜಿಲ್ಲೆಗಳಲ್ಲಿ ಜೂನ್ 21ರವರೆಗೆ ಲಾಕ್ ಡೌನ್ ಮುಂದುವರಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಿರ್ಧರಿಸಿದ್ದು, ಸಂಜೆ ಅಧಿಕೃತ ಆದೇಶ ಹೊರಬೀಳುವ ಸಾಧ್ಯತೆ ಇದೆ.

ಗುರುವಾರ ಜಿಲ್ಲಾಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವೀಡಿಯೋ ಕಾನ್ಫರೆನ್ಸ್ ಮೂಲಕ ಚರ್ಚೆ ನಡೆಸಿದ್ದು, ಬಹುತೇಕರ ಅಭಿಪ್ರಾಯದ ಹಿನ್ನೆಲೆಯಲ್ಲಿ 8 ಜಿಲ್ಲೆಗಳಲ್ಲಿ ಲಾಕ್ ಡೌನ್ ಮುಂದುವರಿಸಲು ತೀರ್ಮಾನಿಸಲಾಯಿತು. ಅಲ್ಲದೇ ವಿನಾಯಿತಿ ನೀಡುವ ಕುರಿತು ನಿರ್ಧಾರ ಕೈಗೊಳ್ಳಲು ಜಿಲ್ಲಾಧಿಕಾರಿಗಳ ವಿವೇಚನೆಗೆ ಬಿಡಲಾಯಿತು.

ಮೈಸೂರು, ಹಾಸನ, ತುಮಕೂರು, ಶಿವಮೊಗ್ಗ, ಮಂಡ್ಯ, ದಕ್ಷಿಣ ಕನ್ನಡ, ಬೆಳಗಾವಿ, ಚಿಕ್ಕಮಗಳೂರು 8 ಜಿಲ್ಲೆಗಳಲ್ಲಿ ಲಾಕ್ ಡೌನ್ ಒಂದು ವಾರ ಮುಂದುವರಿಸಲು ತೀರ್ಮಾನಿಸಲಾಗಿದೆ ಎಂದು ಹೇಳಲಾಗಿದೆ. ಇದೇ ವೇಳೆ ಟೆಸ್ಟಿಂಗ್ ಪ್ರಮಾಣ ಹೆಚ್ಚಿಸಲು ಸಿಎಂ ಸೂಚಿಸಿದರು.

Previous Post Next Post