ಇನ್ನೆರಡು ವರ್ಷ ನಾನೇ ಸಿಎಂ: ಯಡಿಯೂರಪ್ಪ
ವಿರೋಧಿ ಬಣಕ್ಕೆ ಶಾಕ್ ಕೊಟ್ಟ ಬಿಎಸ್ ವೈ
ಹಾಸನ, ಜೂ.11: ರಾಜ್ಯದಲ್ಲಿ ಮುಂದಿನ ಎರಡು ವರ್ಷ ನಾನೇ ಮುಖ್ಯಮಂತ್ರಿಯಾಗಿರುವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ಕೇಂದ್ರದ ನಾಯಕರು ನನ್ನ ಮೇಲೆ ವಿಶ್ವಾಸವಿಟ್ಟು ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅದರಂತೆ ಎಲ್ಲರ ಸಹಕಾರದಿಂದ ಅಭಿವೃದ್ಧಿಯತ್ತ ಗಮನಹರಿಸುವೆ. ರಾಜ್ಯಾದ್ಯಂತ ಪ್ರವಾಸ ಮಾಡಿ ಇನ್ನಷ್ಟು ಅಭಿವೃದ್ಧಿ ಕೆಲಸ ಮಾಡುವೆ ಎಂದು ತಿಳಿಸಿದ್ದಾರೆ.
ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರೇ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಅಂದಿದ್ದಾರೆ. ಹಾಗಾಗಿ ಈ ಗೊಂದಲ ಮತ್ತೆ ಉದ್ಭವಿಸದು. ಅರುಣ್ ಸಿಂಗ್ ಹೇಳಿಕೆಯಿಂದ ನನಗೆ 100ರಷ್ಟು ಬಲ ಬಂದಿದೆ, ಜವಾಬ್ದಾರಿ ಹೆಚ್ಚಾಗಿದೆ. ನನ್ನ ಮೇಲೆ ಪ್ರಧಾನಿ ನರೇಂದ್ರ ಮೋದಿ, ಗೃಹಸಚಿವ ಅಮಿತ್ ಶಾ ಇಟ್ಟುಕೊಂಡಿರುವ ಪ್ರೀತಿ ವಿಶ್ವಾಸ ಉಳಿಸಿಕೊಳ್ಳುವೆ. ಪ್ರಾಮಾಣಿಕವಾಗಿ ಅಭಿವೃದ್ಧಿ ಪರ ಕೆಲಸ ಮಾಡುತ್ತೇನೆ ಎಂದು ಯಡಿಯೂರಪ್ಪ ಹೇಳಿದರು.