ಕರುನಾಡು ಅರ್ಧ ಅನ್ ಲಾಕ್: ಯಾವುದಕ್ಕೆಲ್ಲ ಅನುಮತಿ ಇದೆ? ಇಲ್ಲಿದೆ ಮಾಹಿತಿ

ಕರುನಾಡು ಅರ್ಧ ಅನ್ ಲಾಕ್:  ಯಾವುದಕ್ಕೆಲ್ಲ ಅನುಮತಿ ಇದೆ? ಇಲ್ಲಿದೆ ಮಾಹಿತಿ 

ಬೆಂಗಳೂರು : 
ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಇಳಿಕೆಯಾಗದ ಹಿನ್ನೆಲೆಯಲ್ಲಿ ಈ 11 ಜಿಲ್ಲೆಗಳಲ್ಲಿ ಜೂನ್ 14 ರಿಂದ ಜೂನ್ 21 ರವರೆಗೆ ಲಾಕ್ ಡೌನ್ ಮುಂದುವರೆಸಿ ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ.


ಮುಖ್ಯಮಂತ್ರಿ ಯಡಿಯೂರಪ್ಪ ನಿನ್ನೆ ಸಿಎಂ ಗೃಹ ಕಛೇರಿ ಕೃಷ್ಣಾದಲ್ಲಿ ಸಚಿವರು, ಡಿಸಿಎಂ, ಜಿಲ್ಲಾಧಿಕಾರಿ, ಅಧಿಕಾರಿಗಳೊಂದಿಗೆ ಮಹತ್ವದ ಲಾಕ್ ಡೌನ್ ಸಭೆ ನಡೆಸಿದ ಬಳಿಕ ಸಿಎಂ ಯಡಿಯೂರಪ್ಪ ಈ ನಿರ್ಧಾರ ಪ್ರಕಟಿಸಿದ್ದಾರೆ. ರಾಜ್ಯದ 11 ಜಿಲ್ಲೆಗಳಲ್ಲಿ ಮತ್ತೆ ಪೂರ್ಣ ಪ್ರಮಾಣದ ಲಾಕ್ ಡೌನ್ ಮುಂದುವರೆಸಿದರೆ, ಉಳಿದ 19 ಜಿಲ್ಲೆಗಳಲ್ಲಿ ಸೆಮಿ ಲಾಕ್ ಡೌನ್ ನ್ನು ಘೋಷಣೆ ಮಾಡಲಾಗಿದೆ.


ಮೈಸೂರು, ದಾವಣಗೆರೆ, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ತುಮಕೂರು, ಕೊಡಗು, ಮಂಡ್ಯ, ಚಿಕ್ಕಮಗಳೂರು, ಹಾಸನ, ಬೆಳಗಾವಿ ಸೇರಿದಂತೆ ರಾಜ್ಯದ 11 ಜಿಲ್ಲೆಗಳಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಮಾಣದಲ್ಲಿ ಇಳಿಕೆಯಾಗಿಲ್ಲ. ಹೀಗಾಗಿ ಈ ಜಿಲ್ಲೆಗಳಲ್ಲಿ ಜೂನ್ 14 ರಿಂದ ಜೂನ್ 21 ಬೆಳಿಗ್ಗೆ 6 ರವರೆಗೆ ಒಂದು ವಾರ ಲಾಕ್ ಡೌನ್ ಮುಂದುವರೆಸುವುದಾಗಿ ಸಿಎಂ ಯಡಿಯೂರಪ್ಪ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಈ ಜಿಲ್ಲೆಗಳಲ್ಲಿ ಯಾವುದೇ ಸಡಿಲಿಕೆ ಇರುವುದಿಲ್ಲ, ಈಗಿರುವ ಮಾರ್ಗಸೂಚಿಯೇ ಮುಂದುವರೆಯಲಿದೆ, ಉಳಿದ ಜಿಲ್ಲೆಗಳಲ್ಲಿ ಕೆಲವು ಲಾಕ್ ಡೌನ್ ಸಡಿಲಿಕೆ ಮಾಡಲಾಗಿದೆ ಎಂದು ಸಿಎಂ ಘೋಷಿಸಿದ್ದಾರೆ.


ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ


ರಾಜ್ಯದಲ್ಲಿ ಕೊರೋನಾ ಹೆಚ್ಚಾಗಿರುವಂತ 11 ಜಿಲ್ಲೆಗಳಲ್ಲಿ ಲಾಕ್ ಡೌನ್ ಜೂನ್ 21ರವರೆಗೆ ಮುಂದುವರೆಯಲಿದೆ. ಇತರೆ ಜಿಲ್ಲೆಗಳಲ್ಲಿ ಅನ್ ಲಾಕ್ ಜಾರಿಗೊಳಿಸಲಾಗುತ್ತಿದೆ. ಆದ್ರೇ ಕರ್ಪ್ಯೂ ಮುಂದುವರೆಯಲಿದೆ. ಕಾರ್ಖಾನೆಗಳನ್ನು ತೆರೆಯೋದಕ್ಕೆ ಅವಕಾಶ ನೀಡಲಾಗಿದೆ ಎಂಬುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.


ಉಳಿದ ಎಲ್ಲಾ ಜಿಲ್ಲೆಗಳಲ್ಲಿ ಈಗಾಗಲೇ ಸರ್ಕಾರವು ಹೊರಡಿಸಿರುವ ಮಾರ್ಗಸೂಚಿಗಳಲ್ಲಿ ಈ ಕೆಳಕಂಡ ಸಡಿಲಿಕೆಗಳೊಂದಿಗೆ ದಿನಾಂಕ: 14-06-2021 ರ ಬೆಳಿಗ್ಗೆ 6 ಗಂಟೆಯಿಂದ ದಿನಾಂಕ: 21-06-2021 ಬೆಳಿಗ್ಗೆ 6 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.


ಯಾವುದಕ್ಕೆಲ್ಲಾ ಅನುಮತಿ.?

> ಎಲ್ಲಾ ಕಾರ್ಖಾನೆಗಳನ್ನು ಶೇ. 50 ರಷ್ಟು ಸಿಬ್ಬಂದಿಯ ಹಾಜರಿಯೊಂದಿಗೆ ಕಾರ್ಯನಿರ್ವಹಿಸಲು ಅನುಮತಿಸಿದೆ. ಗಾರ್ಮೆಂಟ್ ಇಂಡಸ್ಟ್ರೀಗಳು ಶೇ. 30 ರಷ್ಟು ಸಿಬ್ಬಂದಿಯ ಹಾಜರಿಯೊಂದಿಗೆ ಕಾರ್ಯನಿರ್ವಹಿಸಲು ಅನುಮತಿ ನೀಡಿದೆ.

> ಪಾರ್ಕ್ ಗಳನ್ನು ಬೆಳಿಗ್ಗೆ 5 ರಿಂದ 10 ಗಂಟೆಯವರೆಗೆ ಅವಕಾಶ ನೀಡಲಾಗಿದೆ.

> ಬೀದಿ ಬದಿ ವ್ಯಾಪಾರಿಗಳಿಗೆ ಬೆಳಿಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ವ್ಯಾಪಾರ ಮಾಡಲು ಅವಕಾಶ ನೀಡಲಾಗಿದೆ.

> ಆಟೋ ಮತ್ತು ಟ್ಯಾಕ್ಸಿಗಳಲ್ಲಿ ಇಬ್ಬರು ಪ್ರಯಾಣಿಕರಿಗೆ ಅವಕಾಶ ನೀಡಲಾಗಿದೆ.

> ಕೋವಿಡ್ ಕರ್ಫ್ಯೂ ರಾತ್ರಿ 7 ಗಂಟೆಯಿಂದ ಬೆಳಿಗ್ಗ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.

> ಎಲ್ಲಾ ಅಗತ್ಯ ಅಂಗಡಿಗಳನ್ನು ಈಗಿರುವ ಸಮಯ ಬೆಳಿಗ್ಗೆ 6 ರಿಂದ 10 ಗಂಟೆಯನ್ನು ವಿಸ್ತರಿಸಿ ಮಧ್ಯಾಹ್ನ 2 ಗಂಟೆಯವರೆಗೆ ಅವಕಾಶ ನೀಡಲಾಗಿದೆ.

> ಎಲ್ಲಾ ನಿರ್ಮಾಣ ಚಟುವಟಿಕೆಗಳನ್ನು ಪ್ರಾರಂಭಿಸಲು ಅನುಮತಿ.

> ವಾರಂತ್ಯದ ಕರ್ಫ್ಯೂ ಶುಕ್ರವಾರ ರಾತ್ರಿ 7 ಗಂಟೆಯಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.

> ಮಧ್ಯಾಹ್ನ 2 ಗಂಟೆವರೆಗೆ ಬಾರ್ ಓಪನ್ ಆದರೆ ಪಾರ್ಸೆಲ್ ಗೆ ಮಾತ್ರ ಅವಕಾಶ

> ಸಿಮೆಂಟ್, ಸ್ಟೀಲ್ ಅಂಗಡಿ ತೆರೆಯಲು ಅವಕಾಶ

> ಅಂತರ್ ಜಿಲ್ಲಾ ಸಂಚಾರಕ್ಕೆ ಅವಕಾಶ

> ಅಂತರ್ ರಾಜ್ಯ ಸಂಚಾರಕ್ಕೂ ಅವಕಾಶ

أحدث أقدم