ದೇಶಾದ್ಯಂತ ಮುಂಗಾರು ಜೋರು: ಮುಂಗಾರು ತವರು ಕೇರಳದಲ್ಲೂ ಮಳೆಯೋ ಮಳೆ, ಮುಂಬೈನಲ್ಲಿ ಹೈ ಅಲರ್ಟ್

ದೇಶಾದ್ಯಂತ ಮುಂಗಾರು ಜೋರು: ಮುಂಗಾರು ತವರು ಕೇರಳದಲ್ಲೂ ಮಳೆಯೋ ಮಳೆ, ಮುಂಬೈನಲ್ಲಿ ಹೈ ಅಲರ್ಟ್  


ಮುಂಬೈ: ದೇಶಾದ್ಯಂತ ಮುಂಗಾರು ಮಳೆ ಜೋರಾಗಿದೆ. ಅದರಲ್ಲೂ ವಾಣಿಜ್ಯ ನಗರಿ ಮುಂಬೈ ಥಂಡಾ ಹೊಡೆಯುತ್ತಿದೆ. ಪ್ರಸಕ್ತ ಸಾಲಿನ ನೈಋತ್ಯ ಮುಂಗಾರು ಮಳೆ ಉತ್ತಮವಾಗಿದ್ದು, ದಕ್ಷಿಣದಲ್ಲಿ ಆರಂಭವಾಗಿ ಪೂರ್ವ ಭಾರತ ಮತ್ತು ಮಧ್ಯ ಭಾರತದ ಸುತ್ತಮುತ್ತ ಬಿರುಬೀಸುತ್ತಿದೆ. ಭಾರತೀಯ ಹವಾಮಾನ ಇಲಾಖೆ (India Meteorological Department -IMD) ವರದಿಗಳ ಪ್ರಕಾರ ಭಾರತದ ಪೂರ್ವ-ಮಧ್ಯ ಭಾಗದಲ್ಲಿ ಮತ್ತು ಬಂಗಾಳ ಕೊಲ್ಲಿಯ ಈಶಾನ್ಯ ಭಾಗದಲ್ಲಿ ಚಂಡಮಾರುತಗಳ ಸುಳಿ ಎದ್ದಿದ್ದು, ವಾಯುಭಾರ ಕುಸಿತ ಉಂಟಾಗಿದೆ. ಇದರಿಂದ ಪಶ್ಚಿಮ ಬಂಗಾಳ, ಒಡಿಶಾ, ಛತ್ತೀಸ್​ಗಢ ರಾಜ್ಯಗಳಲ್ಲಿ ಗುಡುಗು ಸಿಡಿಲು ಸಹಿತ ಭಾರೀ ಮಳೆಯಾಗಲಿದೆ.


ಇನ್ನು ಮುಂಗಾರು ತವರು ಕೇರಳದಲ್ಲಿ ಜೂನ್​ 11- 15 ರ ಮಧ್ಯೆ ಭಾರೀ ಮಳೆಯಾಗಲಿದೆ. ಕೊಂಕಣ ಭಾಗದಲ್ಲಿ ಮತ್ತು ಗೋವಾದಲ್ಲಿಯೂ ಮಳೆಯಾಗಲಿದೆ. ಮಹಾರಾಷ್ಟ್ರ ಮತ್ತು ಕರ್ನಾಟಕದ ಕರಾವಳಿ ಭಾಗದಲ್ಲಿ ತುಂಬಾ ಜೋರು ಮಳೆಯಾಗಲಿದೆ.


ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ನಾಲ್ಕು ದಿನ ಭಾರೀ ಮಳೆ, ಆರೆಂಜ್ ಅಲರ್ಟ್ ಘೋಷಣೆ 


ಈಗಾಗಲೇ ರಾಜ್ಯಕ್ಕೆ ಮುಂಗಾರು​​ ಕಾಲಿಟ್ಟಿದ್ದು, ವರುಣ ತನ್ನ ಆರ್ಭಟ ತೋರಿಸುತ್ತಿದೆ. ಕಳೆದ ಕೆಲ ದಿನಗಳಿಂದ ರಾಜ್ಯದ ವಿವಿಧೆಡೆ ಭಾರೀ ಮಳೆಯಾಗುತ್ತಿದೆ. ದಕ್ಷಿಣ ಭಾರತದ ಪಶ್ಚಿಮ ಕರಾವಳಿ ಪ್ರದೇಶಗಳಲ್ಲಿ ಇಂದಿನಿಂದ ಅಧಿಕ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದಲ್ಲಿಯೂ ಮಳೆಯ ಆರ್ಭಟ ಜೋರಾಗಿದ್ದು, ಇನ್ನೂ ನಾಲ್ಕು ದಿನಗಳ ಕಾಲ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಮಳೆ ತೀವ್ರಗೊಳ್ಳಲಿದೆ.


ಪಶ್ಚಿಮ ಕರಾಳಿಯ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗಲಿದೆ. ಕರಾವಳಿ ರಾಜ್ಯಗಳಾದ ಮಹಾರಾಷ್ಟ್ರ, ಗೋವಾ, ಕರ್ನಾಟಕ ಮತ್ತು ಕೇರಳದಲ್ಲಿ ಇನ್ನೂ ನಾಲ್ಕು ದಿನ ಅಧಿಕ ಮಳೆಯಾಗಲಿದೆ. ಕರಾವಳಿ ಕರ್ನಾಟಕದಲ್ಲಿ ಶನಿವಾರದಿಂದ ಮಂಗಳವಾರದವರೆಗೆ ಮಳೆಯ ಆರ್ಭಟ ಜೋರಾಗಲಿದೆ. ಇದೇ ಸಮಯದಲ್ಲಿ ಕೇರಳದಲ್ಲೂ ಕೂಡ ಭಾರೀ ಮಳೆಯಾಗಲಿದೆ.


ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ಕಿಸಿ
Previous Post Next Post