💥ನಾಳೆ ರಾಜ್ಯಕ್ಕೆ ಮುಂಗಾರು ಪ್ರವೇಶ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ
ಬೆಂಗಳೂರು : ದೇವರ ನಾಡು ಕೇರಳಕ್ಕೆ ಈಗಾಗಲೇ ಮುಂಗಾರು ಪ್ರವೇಶ ಮಾಡಿದ್ದು, ನಾಳೆ ರಾಜ್ಯಕ್ಕೆ ಮುಂಗಾರು ಪ್ರವೇಶವಾಗಲಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ ನಾಳೆಯಿಂದ ರಾಜ್ಯದಲ್ಲಿ ಗುಡುಗು -ಮಿಂಚು ಸಹಿತ ಮಳೆಯಾಗಲಿದ್ದು, ಗಂಟೆಗೆ 30-40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಲಿದೆ.
For more news visit our site clik
Join our whatsapp group Click here
ಸದ್ಯ ಅರಬ್ಬಿ ಸಮುದ್ರದ ಮಧ್ಯ ಭಾಗದಲ್ಲಿ ಮೇಲ್ಮೆ ಸುಳಿಗಾಳಿ ತೀವ್ರವಾಗಿರುವುದರಿಂದ ಕರ್ನಾಟಕದ ಕೆಲವೆಡೆ ಜೂನ್ 1ರಿಂದ ಮಳೆಯಾಗುತ್ತಿದೆ. ಇದು ಜೂನ್ 6ರ ತನಕವೂ ಮುಂದುವರೆಯುವ ಸಾಧ್ಯತೆಯಿದೆ.
ಈ ಹಿನ್ನೆಲೆಯಲ್ಲಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೀದರ್, ಗದಗ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ತುಮಕೂರು, ಕಲಬುರಗಿ, ಚಿಕ್ಕಮಗಳೂರು, ಶಿವಮೊಗ್ಗ, ಚಿತ್ರದುರ್ಗ, ಕೊಡಗು, ಹಾಸನ, ಕೊಪ್ಪಳ, ದಾವಣಗೆರೆ ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ.