ಇಂದು ಸಿಎಂ ಬಿಎಸ್ವೈ ಮಹತ್ವದ ಸಭೆ, ಅನ್ ಲಾಕ್ ಬಗ್ಗೆ ಇಂದು ಮಹತ್ವದ ನಿರ್ಧಾರ, ಕರುನಾಡಿಗೆ ಹಾಕಿದ ಬೀಗ ತೆರವು ಯಾವಗ?? ರಾಜ್ಯದಲ್ಲಿ ಹಂತ ಹಂತವಾಗಿ ಅನ್ ಲಾಕ್ ಸಾದ್ಯತೆ

ಇಂದು ಸಿಎಂ ಬಿಎಸ್ವೈ ಮಹತ್ವದ ಸಭೆ, ಅನ್ ಲಾಕ್ ಬಗ್ಗೆ ಇಂದು ಮಹತ್ವದ ನಿರ್ಧಾರ

ಕರುನಾಡಿಗೆ ಹಾಕಿದ ಬೀಗ ತೆರವು ಯಾವಗ?? ರಾಜ್ಯದಲ್ಲಿ ಹಂತ ಹಂತವಾಗಿ ಅನ್ ಲಾಕ್ ಸಾದ್ಯತೆ 


ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಂತಹಂತವಾಗಿ ಲಾಕ್ ಡೌನ್ ಸಡಿಲಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಇಂದು ಸಿಎಂ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ.


ಇಂದು ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಜೊತೆಗೆ ಮಹತ್ವದ ಸಭೆ ನಡೆಯಲಿದ್ದು, ಸೋಮವಾರದಿಂದ ಹಂತ ಹಂತವಾಗಿ ನಿರ್ಬಂಧ ತೆರವು ಮಾಡುವುದು ಬಹುತೇಕ ಫಿಕ್ಸ್ ಆಗಿದೆ ಎನ್ನಲಾಗಿದೆ.


ಕೊರೊನಾ ಎರಡನೇ ಅಲೆ ಪ್ರಭಾವ ತಗ್ಗುತ್ತಿದ್ದರೂ ಕೆಲವು ಜಿಲ್ಲೆಗಳಲ್ಲಿ ಗಂಭೀರ ಪರಿಸ್ಥಿತಿಯಿದೆ.ಈ ಹಿನ್ನೆಲೆಯಲ್ಲಿ ರಾಜ್ಯವ್ಯಾಪಿ ಏಕಸ್ವರೂಪದ ಆನ್ ಲಾಕ್ ಜಾರಿಗೊಳಿಸುವುದು ಅನುಮಾನ. ತಜ್ಞರ ಸಲಹೆ ಪ್ರಕಾರ ಹೊಸ ಪ್ರಕರಣಗಳು 5 ಸಾವಿರಕ್ಕಿಂತ ಕಡಿಮೆ ಹಾಗೂ ಪಾಸಿಟಿವಿಟಿ ದರ ಶೇ. 5ಕ್ಕಿಂತಲೂ ಕಡಿಮೆ ಇದ್ದರೆ ಮಾತ್ರ ಅನ್ ಲಾಕ್ ಮಾಡುವುದು ಸೂಕ್ತ ಎಂದು ತಿಳಿಸಿದ್ದಾರೆ ಎನ್ನಲಾಗಿದೆ.

#ನಮ್ಮ ಆರೋಗ್ಯ ರಕ್ಷಣೆ ನಮ್ಮ ಹೊಣೆ, 
Previous Post Next Post