💥ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು,
ರಾಜ್ಯದಲ್ಲಿ ಕೊರೋನಾ ಅಟ್ಟಹಾಸ ಮುಂದುವರಿದಿದ್ದು ಆ ಕಾರಣ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದುಗೊಳಿಸಿ ಶಿಕ್ಷಣ ಸಚಿವರು ಇಂದು ಆದೇಶ ಹೊರಡಿಸಿದ್ದಾರೆ. ವಿದ್ಯಾರ್ಥಿಗಳನ್ನು ಪ್ರಥಮ ಪಿಯು ಪರೀಕ್ಷೆ ಗ್ರೇಡಿಂಗ್ ಆಧಾರದಲ್ಲೇ ಪಾಸ್ ಮಾಡಲಾಗುತ್ತದೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ವರ್ಷ ಪ್ರಥಮ ಪಿಯುಸಿಯ ವಿದ್ಯಾರ್ಥಿಗಳ ಅಂಕಗಳ ಆಧಾರದ ಮೇಲೆ ಪಿಯು ಬೋರ್ಡ್ ಮಾನದಂಡದ ಆಧಾರದ ಮೇಲೆ ಎ ಪ್ಲಸ್, ಎ, ಬಿ, ಅನುಸಾರ ಪಾಸ್ ಮಾಡಲಾಗುವುದು. ಫಲಿತಾಂಶದ ಬಗ್ಗೆ ತೃಪ್ತಿ ಇಲ್ಲದ ವಿದ್ಯಾರ್ಥಿಗಳು ಕೋವಿಡ್ ನಂತರ ಪರೀಕ್ಷೆ ಬರೆಯಬಹುದು, ಅವರಿಗಾಗಿ ಪರೀಕ್ಷೆ ನಡೆಸಲಾಗುವುದು. ಈಗಿನ ನಿರ್ಧಾರದಂತೆ ಎಲ್ಲಾ ಪಿಯುಸಿ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೇ ಪಾಸ್ ಮಾಡಲಾಗುವುದು. ಈ ವರ್ಷ ಸೆಕೆಂಡ್ ಪಿಯುಸಿ ಪರೀಕ್ಷೆ ನಡೆಸುವುದಿಲ್ಲ. ಗ್ರೇಡ್ ಆಧಾರದಲ್ಲಿ ಪಾಸ್ ಮಾಡಲಾಗುವುದು ಎಂದು ತಿಳಿಸಿದ್ದಾರೆ.
💥ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ರದ್ದು ಇಲ್ಲ
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಎರಡು ಪರೀಕ್ಷೆಗಳು ನಡೆಯಲಿದೆ.
ವಿಜ್ಞಾನ, ಗಣಿತ, ಸಮಾಜ ವಿಜ್ಞಾನ ಸೇರಿ ಒಂದು ಪೇಪರ್,
ಬಹು ಆಯ್ಕೆ ಪ್ರಶ್ನೆ ಪತ್ರಿಕೆಯಲ್ಲಿ ಮೂರು ವಿಷಯಗಳು, ಪ್ರತಿ ವಿಷಯಕ್ಕೂ ನಲವತ್ತು ಅಂಕಗಳ ಒಂದು ಪ್ರಶ್ನೆ ಪತ್ರಿಕೆ ಇರಲಿದೆ
ಮತ್ತು ಐಚ್ಛಿಕ ಭಾಷೆಗಳಿಗೆ ಒಂದೇ ಪೇಪರ್, ಜುಲೈ ಮೂರನೇ ವಾರದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಲಿದ್ದು, ಆಗಸ್ಟ್ ಮೊದಲ ವಾರದಲ್ಲಿ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ.