💥SSLC, 2nd PUC ಪರೀಕ್ಷೆಗಳ ಭವಿಷ್ಯ ಇಂದು ನಿರ್ಧಾರ!! ಗೊಂದಲಕ್ಕೆ ತೆರೆ ಎಳೆಯುತ್ತಾ ಸರಕಾರ.!? ಶಿಕ್ಷಣ ಸಚಿವರಿಂದ ಇಂದು ಮಹತ್ವದ ಸುದ್ದಿಗೋಷ್ಠಿ
ಬೆಂಗಳೂರು: ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ದೇಶದ ಅನೇಕ ರಾಜ್ಯಗಳಲ್ಲಿ 12ನೇ ತರಗತಿಯ ಪರೀಕ್ಷೆಯನ್ನ ರದ್ದುಗೊಳಿಸಲಾಗಿದೆ. ಈ ಹಿನ್ನಲೆಯಲ್ಲಿ ರಾಜ್ಯದಲ್ಲೂ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನ ನಡೆಸುವ/ನಡೆಸದಿರುವ ಕುರಿತು ಮಾಹಿತಿ ನೀಡಲು ಶಿಕ್ಷಣ ಸಚಿವ ಸುರೇಶ್ ಕುಮಾರ್ ಸುದ್ದಿಗೋಷ್ಠಿ ಕರೆದಿದ್ದಾರೆ.
ಬೆಳಿಗ್ಗೆ 10 ಗಂಟೆಗೆ ಎಸ್. ಸುರೇಶ್‌ಕುಮಾರ್ ಸರ್ವಶಿಕ್ಷಣ ಅಭಿಯಾನದ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಲಿದ್ದು ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸಬೇಕೇ, ಬೇಡವೇ ಎಂಬ ನಿರ್ಧಾರ ತಿಳಿಸಲಿದ್ದಾರೆ ಎನ್ನಲಾಗಿದೆ.
Join Our Whatsapp click here
Visit Our Site For more news click here