SSLC ವಿದ್ಯಾರ್ಥಿಗಳ ಗಮನಕ್ಕೆ- ಬಹು ಆಯ್ಕೆ ಪ್ರಶ್ನೆ ಆಧಾರಿತ ಮಾದರಿ ಪ್ರಶ್ನೆ ಪತ್ರಿಕೆ ಪ್ರಕಟ, ಉದ್ಯೋಗ ನೇಮಕಾತಿಗೆ ನಡೆಸುವ ಬಹು ಆಯ್ಕೆ ಪ್ರಶ್ನೆ ಪತ್ರಿಕೆ ಮಾದರಿಯಲ್ಲಿ ಈ ಬಾರಿ SSLC ಪರೀಕ್ಷೆ

SSLC ವಿದ್ಯಾರ್ಥಿಗಳ ಗಮನಕ್ಕೆ- ಬಹು ಆಯ್ಕೆ ಪ್ರಶ್ನೆ ಆಧಾರಿತ ಮಾದರಿ ಪ್ರಶ್ನೆ ಪತ್ರಿಕೆ ಪ್ರಕಟ 

ಉದ್ಯೋಗ ನೇಮಕಾತಿಗೆ ನಡೆಸುವ ಬಹು ಆಯ್ಕೆ ಪ್ರಶ್ನೆ ಪತ್ರಿಕೆ ಮಾದರಿಯಲ್ಲಿ ಈ ಬಾರಿ SSLC  ಪರೀಕ್ಷೆ
ಬೆಂಗಳೂರು: ಎಸ್.ಎಸ್.ಎಲ್.ಸಿ. ಮಾದರಿ ಪ್ರಶ್ನೆ ಪತ್ರಿಕೆ ಪ್ರಕಟಗೊಂಡಿದ್ದು, ಬಹು ಆಯ್ಕೆಯ ಮೊದಲ ಪ್ರಶ್ನೆ ಪತ್ರಿಕೆಯನ್ನು ಬೋರ್ಡ್ ವೆಬ್ ಸೈಟ್ ನಲ್ಲಿ ಬಿಡುಗಡೆ ಮಾಡಲಾಗಿದೆ.


ಜುಲೈ ಮೂರನೇ ವಾರದಲ್ಲಿ ಪರೀಕ್ಷೆ ನಡೆಸಲು ಸಿದ್ಧತೆ ನಡೆಸಲಾಗಿದ್ದು, ಇದೀಗ www.sslc.karnataka.gov.in ವೆಬ್ ಸೈಟ್ ನಲ್ಲಿ ಮಾದರಿಯ ಗಣಿತ ವಿಜ್ನಾನ, ಸಮಾಜ ವಿಜ್ನಾನ ವಿಷಯಗಳ ಮೊದಲ ಪ್ರಶ್ನೆ ಪತ್ರಿಕೆ ಪ್ರಕಟಿಸಲಾಗಿದೆ. ವಿದ್ಯಾರ್ಥಿಗಳು ಉತ್ತರವನ್ನು ಒಎಂಆರ್ ಶೀಟ್ ನಲ್ಲಿ ನಮೂದಿಸಬಹುದು.


ಮಾತೃಭಾಷೆ ಸೇರಿ ಮೂರು ವಿಷಯಗಳ ಎರಡನೇ ಪ್ರಶ್ನೆ ಪತ್ರಿಕೆ ಇನ್ನು ಎರಡು ದಿನಗಳಲ್ಲಿ ಪ್ರಕಟವಾಗಲಿದ್ದು, ವೆಬ್ ಸೈಟ್ ನಲ್ಲಿ ಡೌನ್ ಲೋಡ್ ಮಾಡಿ ವಿದ್ಯಾರ್ಥಿಗಳು ಪರೀಕ್ಷೆಗೆ ಸಿದ್ಧತೆ ನಡೆಸಿಕೊಳ್ಳಲು ಸೂಚಿಸಲಾಗಿದೆ.


ಕೊರೊನಾ ಸಂಕಷ್ಟದ ನಡುವೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ತಯಾರಿ ನಡೆಸಿದೆ. ಜುಲೈ 2021ರ ಎಸೆಸೆಲ್ಸಿಪರೀಕ್ಷೆಗೆ ಸಂಬಂಧಿಸಿದ ಬಹು ಆಯ್ಕೆ ಪ್ರಶ್ನೆ ಆಧಾರಿತ ಮಾದರಿ ಪ್ರಶ್ನೆಪತ್ರಿಕೆಗಳನ್ನು, ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಿಸಿದೆ. ಉದ್ಯೋಗ ನೇಮಕಾತಿಗೆ ನಡೆಸುವ ಬಹು ಆಯ್ಕೆ ಪ್ರಶ್ನೆ ಪತ್ರಿಕೆ ಮಾದರಿಯಲ್ಲಿ ಪರೀಕ್ಷೆಯನ್ನು ಈ ಬಾರಿ ನಡೆಸಲಾಗುತ್ತಿದೆ.


ಜೂನ್ 2021ರಲ್ಲಿ ನಡೆಯಬೇಕಿದ್ದ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಮುಂದೂಡಿ ಕೊವೀಡ್ ಕಾರಣದಿಂದ ಮತ್ತಷ್ಟು ಸರಳೀಕರಿಸಿ ಎರಡು ದಿನಗಳಿಗೆ ಪರೀಕ್ಷೆಯನ್ನು ಸೀಮಿತಗೊಳಿಸಿ, ಬಹು ಆಯ್ಕೆ ಪ್ರಶ್ನೆ ( Multiple Choice Question Based ) ಮಾದರಿಯಲ್ಲಿ ವಿಷಯವಾರು ಗರಿಷ್ಠ 40 ಅಂಕಗಳಿಗೆ ಪರೀಕ್ಷೆಯನ್ನು ನಡೆಸಲು ತೀರ್ಮಾನಿಸಿದೆ.


ಇತರ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

أحدث أقدم