ರಾಜ್ಯದಲ್ಲಿ ಕೊರೊನ ಗಣನೀಯ ಇಳಿಕೆ, ಇಂದು 1,564 ಪಾಸಿಟಿವ್ ಕೇಸ್, ಪಾಸಿಟಿವಿಟಿ ದರ ಶೇ. 1.02ಕ್ಕೆ ಕುಸಿತ
ರಾಜ್ಯದಲ್ಲಿ ಕೊರೋನಾ ಕಡಿಮೆಯಾಗುತ್ತಿದ್ದು ಇಂದು 1,564 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಕಳೆದ 24 ಗಂಟೆಯಲ್ಲಿ ಮಹಾಮಾರಿಗೆ 59 ಮಂದಿ ಬಲಿಯಾಗಿದ್ದಾರೆ.
ರಾಜ್ಯದಲ್ಲಿ ಇಂದು ಸಹ ಹೊಸ ಪಾಸಿಟಿವ್ ಪ್ರಕರಣಗಳಿಗಿಂತ ಹೆಚ್ಚು ಅಂದರೆ 4,775 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು 44,846 ಸಕ್ರೀಯ ಪ್ರಕರಣಗಳಿವೆ.
ರಾಜ್ಯಾದ್ಯಂತ ಇಂದು 1,53,083 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 1,564 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 1.02ಕ್ಕೆ ಇಳಿದಿದೆ.
ಜಿಲ್ಲಾವಾರು ಪ್ರಕರಣಗಳು ಈ ರೀತಿ ಇದೆ
ಸೂಚನೆ- ದೇಶದಲ್ಲಿ ಕೊರೋನಾ ಸೋಂಕಿನ ಹಾವಳಿ ಕಡಿಮೆಯಾಗಿದ್ದರೂ ಸಂಪೂರ್ಣವಾಗಿ ನಿಂತಿಲ್ಲ. ಆದ್ದರಿಂದ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಮತ್ತು ಕೊರೋನಾ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ. ಜೊತೆಗೆ ವ್ಯಾಕ್ಸಿನೇಷನ್ ಪಡೆಯುವುದನ್ನು ಮರೆಯದಿರಿ. ಇದು 'ಈಗಿನ ಸುದ್ದಿ'ಯ ಕಳಕಳಿ