ರಾಜ್ಯದಲ್ಲಿ ಇಂದು 1,606 ಪಾಸಿಟಿವ್, 1,937 ಗುಣಮುಖರು
ಬೆಂಗಳೂರು, ಜು.26: ರಾಜ್ಯದಲ್ಲಿ ಸೋಮವಾರ 1,606 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. 31 ಜನರು ಸೋಂಕಿಗೆ ಬಲಿಯಾಗಿದ್ದು, 1,937 ಜನರು ಗುಣಮುಖರಾಗಿದ್ದಾರೆ.
ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 28,96,163ಕ್ಕೆ ತಲುಪಿದೆ. ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 36,405ಕ್ಕೆ ತಲುಪಿದೆ.
ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 23,057 ಕ್ಕೆ ಏರಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.
ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 1,606 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬೆಳಗಾವಿ 69, ಬೆಂಗಳೂರು ಗ್ರಾಮಾಂತರ 17, ಬೆಂಗಳೂರು ನಗರ 467, ಚಾಮರಾಜನಗರ 54, ಚಿಕ್ಕಬಳ್ಳಾಪುರ 7, ಚಿಕ್ಕಮಗಳೂರು 38, ಚಿತ್ರದುರ್ಗ 36, ದಕ್ಷಿಣ ಕನ್ನಡ 357, ದಾವಣಗೆರೆ 11, ಧಾರವಾಡ 8, ಗದಗ 10, ಹಾಸನ 57, ಹಾವೇರಿ 2, ಕೊಡಗು 19, ಕೋಲಾರ 28, ಮಂಡ್ಯ 40, ಮೈಸೂರು 162, ರಾಯಚೂರು 2, ರಾಮನಗರ 3, ಶಿವಮೊಗ್ಗ 52, ತುಮಕೂರು 59, ಉಡುಪಿ 78, ಉತ್ತರ ಕನ್ನಡ 19, ವಿಜಯಪುರ 9, ಯಾದಗಿರಿ ಜಿಲ್ಲೆಯಲ್ಲಿ 2 ಪ್ರಕರಣ ಪತ್ತೆಯಾಗಿವೆ.
ರಾಜ್ಯ ರಾಜಕೀಯದಲ್ಲಿ ಬಿರುಸಿನ ಚಟುವಟಿಕೆ, ಗದ್ದುಗೆ ಖಾಲಿ, ಹುದ್ದೆ ಯಾರಿಗೆ??
ಬೆಂಗಳೂರು, (ಜು.26): ಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದಂತೆಯೇ ರಾಜ್ಯ ಬಿಜೆಪಿಯಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿವೆ.
ಮುಂದಿನ ಮುಖ್ಯಮಂತ್ರಿ ಯಾರನ್ನ ಮಾಡಬೇಕೆಂಬ ಲೆಕ್ಕಾಚಾರದಲ್ಲಿ ಬಿಜೆಪಿ ಹೈಕಮಾಂಡ್ ಇದ್ದು, ಇದಕ್ಕಾಗಿ ಧರ್ಮೇಂದ್ರ ಪ್ರಧಾನ್, ಕರ್ನಾಟಕ ಸಿಎಂ ಆಯ್ಕೆಯ ವೀಕ್ಷಕರಾಗಿ ನೇಮಕ ಮಾಡಲಾಗಿದೆ.
ಆದ್ರೆ, ವೀಕ್ಷಕರ ವೀಕ್ಷಕರ ತಂಡ ರಾಜ್ಯಕ್ಕೆ ಆಗಮಿಸುವ ಮೊದಲೇ ಬಿಎಲ್ ಸಂತೋಷ್ ಇಂದು (ಸೋಮವಾರ) ರಾತ್ರಿ ಬೆಂಗಳೂರಿಗೆ ಆಗಮಿಸುತ್ತಿರುವುದು ತೀವ್ರ ಕುತೂಹಲ ಮೂಡಿಸಿದೆ. ನಾಳೆ (ಮಂಗಳವಾರ) ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಳ್ಳಲು ಆಗಮಿಸುತ್ತಿದ್ದಾರೆ ಎನ್ನಲಾಗಿದೆ.
ಈಗಾಗಲೇ ಮುಂದಿನ ಸಿಎಂ ರೇಸ್‌ನಲ್ಲಿ ಪ್ರಲ್ಹಾದ್ ಜೋಶಿ, ಮುರುಗೇಶ್ ನಿರಾಣಿ, ಅರವಿಂದ್ ಬೆಲ್ಲದ್ ಸೇರಿದಂತೆ ಇನ್ನು ಕೆಲ ಹೆಸರುಗಳು ಕೇಳಿಬರುತ್ತಿವೆ. ಇವುಗಳ ನಡುವೆ ಬಿಲ್ ಸಂತೋಷ್ ಅವರ ಹೆಸರು ಸಹ ಚರ್ಚೆಯಲ್ಲಿದೆ. ಇದರ ನಡುವೆ ಇದೀಗ ಬಿಎಲ್ ಸಂತೋಷ್ ಅವರು ಬೆಂಗಳೂರಿಗೆ ಆಗಮಿಸುತ್ತಿರುವುದು ಸಂಚಲನ ಮೂಡಿಸಿದೆ.
ಬಿಲ್ ಸಂತೋಷ್ ತಾವೇ ಮುಖ್ಯಮಂತ್ರಿ ಆಗುತ್ತಾರಾ? ಅಥವಾ ಮುಂದಿನ ಸಿಎಂ ಅಭ್ಯರ್ಥಿಯನ್ನು ಆಯ್ಕೆ ಮಾಡ್ತಾರಾ...? ಎನ್ನುವುದು ಕುತೂಹಲ ಕೆರಳಿಸಿದ್ದು, ರಾಜ್ಯ ಬಿಜೆಪಿಯಲ್ಲಿ ಏನೆಲ್ಲಾ ಬೆಳವಣಿಗೆಗಳು ಆಗುತ್ತವೆ ಎನ್ನುವುದನ್ನು ಕಾದುನೋಡಬೇಕಿದೆ.