ರಾಜ್ಯದಲ್ಲಿ ಕೊರೊನ ಇಳಿಕೆ: ಇಂದು1708 ಕೊರೊನಾ ಸೋಂಕು ದೃಢ, 2463 ಡಿಸ್ಚಾರ್ಜ್

ರಾಜ್ಯದಲ್ಲಿ ಕೊರೊನ ಇಳಿಕೆ: ಇಂದು1708 ಕೊರೊನಾ ಸೋಂಕು ಪ್ರಕರಣಗಳು ದೃಢ, 2463 ಡಿಸ್ಚಾರ್ಜ್


ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 1708 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 36 ಮಂದಿ ಮೃತಪಟ್ಟಿದ್ದಾರೆ. ಕಳೆದ ಕೆಲವು ದಿನಗಳಿಂದ ಹೋಲಿಸಿದರೆ ಕೊರೊನಾ ಪ್ರಮಾಣದಲ್ಲಿ ಕುಸಿತ ಕಂಡು ಬಂದಿದೆ.


ರಾಜ್ಯದಲ್ಲಿ ಒಂದೇ ದಿನ 2463 ಮಂದಿ ಗುಣಮುಖಿತರಾಗಿದ್ದು, ಒಟ್ಟಾರೆ ಗುಣಮುಖಿತರ ಸಂಖ್ಯೆ 28,18,476ಕ್ಕೆ ಏರಿಕೆಯಾಗಿದೆ. ಒಟ್ಟಾರೆ ಸೋಂಕಿತರ ಸಂಖ್ಯೆ 18,83,947ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 36,157ಕ್ಕೆ ಜಿಗಿತ ಕಂಡಿದೆ. ರಾಜ್ಯದಲ್ಲಿ ಇನ್ನಿರುವ ಸಕ್ರಿಯ ಪ್ರಕರಣಗಳ ಸಂಖ್ಯೆ 29,291ಕ್ಕೆ ಇಳಿದಿದೆ.


ಜಿಲ್ಲಾವಾರು ಪ್ರಕರಣಗಳು ಈ ರೀತಿ ಇದೆಸೂಚನೆ- ರಾಜ್ಯದಲ್ಲಿ ಕೊರೋನಾ ಸೋಂಕಿನ ಹಾವಳಿ ಕಡಿಮೆಯಾಗಿದ್ದರೂ ಸಂಪೂರ್ಣವಾಗಿ ನಿಂತಿಲ್ಲ. ಆದ್ದರಿಂದ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಮತ್ತು ಕೊರೋನಾ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ. ಜೊತೆಗೆ ವ್ಯಾಕ್ಸಿನೇಷನ್‌ ಪಡೆಯುವುದನ್ನು ಮರೆಯದಿರಿ. ಇದು ‌'ಈಗಿನ ಸುದ್ದಿ'ಯ ಕಳಕಳಿ


Read More

Previous Post Next Post