ಜುಲೈ 20 ರಂದು ದ್ವಿತೀಯ ಪಿಯು ಫಲಿತಾಂಶ ಪ್ರಕಟ, ವೆಬ್‌ಸೈಟ್ ನಲ್ಲಿ ಲಭ್ಯವಾಗಲಿದೆ

ಜುಲೈ 20 ರಂದು ದ್ವಿತೀಯ ಪಿಯು ಫಲಿತಾಂಶ ಪ್ರಕಟ, ವೆಬ್‌ಸೈಟ್ ನಲ್ಲಿ ಲಭ್ಯವಾಗಲಿದೆ



ಬೆಂಗಳೂರು: ಈ ಬಾರಿಯ ದ್ವಿತೀಯ ಪಿಯುಸಿ ಫಲಿತಾಂಶವನ್ನು (Second PUC Results 2021) ಜುಲೈ 20ರಂದು ಪ್ರಕಟಿಸುವುದಾಗಿ ಶಿಕ್ಷಣ ಇಲಾಖೆ ತಿಳಿಸಿದೆ. ಕೊರೊನಾ ಕಾರಣದಿಂದ ಸ್ಥಗಿತಗೊಂಡಿರುವ ದ್ವಿತೀಯ ಪಿಯುಸಿ ಪರೀಕ್ಷೆಗೆ ಸಂಬಂಧಿಸಿದಂತೆ ಸಿಬಿಎಸ್‌ಇ ಮಾದರಿಯಲ್ಲಿ ಎಸ್‌ಎಸ್‌ಎಲ್‌ಸಿ, ಪಿಯು ಅಂಕ ಪರಿಗಣಿಸಿ ಫಲಿತಾಂಶ (Result) ನೀಡಲು ಸಿದ್ಧತೆ ಕೈಗೊಳ್ಳಲಾಗಿದ್ದು, ಗ್ರೇಡ್ ಬದಲು ಅಂಕಗಳ ಆಧಾರದಲ್ಲಿ ಫಲಿತಾಂಶ ಹೊರಬೀಳಲಿದ್ದು, ಜುಲೈ 20 ರಂದು ವೆಬ್‌ಸೈಟ್‌ನಲ್ಲಿ (Website) ಫಲಿತಾಂಶ ಪ್ರಕಟವಾಗಲಿದೆ.


ಎಸ್​ಎಸ್​ಎಲ್​ಸಿ ಮೊದಲ ಪರೀಕ್ಷೆಯ ಮರುದಿನವೇ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ. ಜು.19 ರಂದು 10ನೇ ತರಗತಿ ಮೊದಲ ಪರೀಕ್ಷೆ ನಡೆಯಲಿದೆ. ಜು.20ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ. ಈ ಬಾರಿ ಯಾವುದೇ ರ್ಯಾಂಕ್​ ಇರುವುದಿಲ್ಲ. ಸಿಬಿಎಸ್​ಇ ಮಾದರಿಯಲ್ಲಿ ಎಸ್​ಎಸ್​ಎಲ್​ಸಿ, ಪ್ರಥಮ ಪಿಯು ಅಂಕಗಳನ್ನು ಪರಿಗಣಿಸಿ ಫಲಿತಾಂಶ ನೀಡಲಾಗುತ್ತದೆ.


ಫಲಿತಾಂಶದ ಬಗ್ಗೆ ಮಾಹಿತಿ ನೀಡಿರುವ ಪದವಿ ಪೂರ್ವ ಶಿಕ್ಷಣ ಇಲಾಖೆ, ಈ ಬಾರಿ ಯಾವುದೇ ಗೊಂದಲಕ್ಕೆ ಆಸ್ಪದವಿಲ್ಲದಂತೆ ವ್ಯವಸಸ್ಥಿತವಾಗಿ ಫಲಿತಾಂಶ ನೀಡಲಾಗುವುದು ಎಂದು ಹೇಳಿದೆ. ಈ ಬಾರಿ ಯಾವುದೇ ರ್ಯಾಂಕ್‌ ಇರುವುದಿಲ್ಲ. ಗ್ರೇಡ್ ಬದಲು, ಅಂಕಗಳ ಆಧಾರದಲ್ಲೇ ಫಲಿತಾಂಶವಿರಲಿದೆ. ಸಿಬಿಎಸ್‌ಇ ಮಾದರಿಯಲ್ಲಿ ಎಸ್‌ಎಸ್​ಎಲ್‌ಸಿ, ಪಿಯು ಅಂಕ ಪರಿಗಣಿಸಿ ಪ್ರಕಟಿಸಲಾಗುವುದು. ಎಸ್‌ಎಸ್​ಎಲ್‌ಸಿ ಮೊದಲ ಪರೀಕ್ಷೆ ಮರುದಿನವೇ ಪಿಯು ಫಲಿತಾಂಶ ನೀಡಲು ನಿರ್ಧರಿಸಲಾಗಿದ್ದು, ವೆಬ್​ಸೈಟ್​ನಲ್ಲಿ ಲಭ್ಯವಾಗಲಿದೆ ಎಂದು ತಿಳಿಸಿದೆ.


ಫಲಿತಾಂಶ ನೋಡುವುದು ಹೇಗೆ?
ಆದರೆ, ಫಲಿತಾಂಶ ನೀಡಲು ಪಿಯು ಬೋರ್ಡ್ ಮುಂದೆ ಸವಾಲೊಂದು ಎದುರಾಗಿದ್ದು, ನೋಂದಣಿ ಸಂಖ್ಯೆ ಇಲ್ಲದೇ ಫಲಿತಾಂಶ ನೋಡುವುದು ಹೇಗೆ ಎಂಬ ಗೊಂದಲ ಬಗೆಹರಿಸಲು ಪಿಯು ಬೋರ್ಡ್​ ಸ್ಪಷ್ಟನೆ ನೀಡಿದೆ. ಪ್ರತಿ ವರ್ಷ ಪರೀಕ್ಷೆ‌ಗೆ ಕೊಟ್ಟ ನೋಂದಣಿ ಸಂಖ್ಯೆ ಮೇಲೆ ಫಲಿತಾಂಶ ಸಿಗುತ್ತಿತ್ತು. ಈ ಬಾರಿ ಪರೀಕ್ಷೆಯಾಗದೆ ರಿಜಿಸ್ಟರ್ ‌ನಂಬರ್ ಸಿಕ್ಕಿಲ್ಲ. ಹೀಗಾಗಿ, ಫಲಿತಾಂಶ ಸಲುವಾಗಿ ವಿದ್ಯಾರ್ಥಿಗಳಿಗೆ ಹೊಸದಾಗಿ ರಿಜಿಸ್ಟರ್‌ ನಂಬರ್ ಜನರೇಟ್ ಮಾಡುವ ವ್ಯವಸ್ಥೆ ಮಾಡಲಾಗಿದೆ. Know my number ಆಯ್ಕೆಯನ್ನು ಪಿಯು ವೆಬ್​ಸೈಟ್ ಮೂಲಕ ವಿದ್ಯಾರ್ಥಿಗಳು ಪರಿಶೀಲಿಸಬಹುದು. ವಿದ್ಯಾರ್ಥಿಗಳಿಗೆ ಎಸ್​ಎಂಸ್​ ಮೂಲಕ ತಿಳಿಸುವುದರೊಂದಿಗೆ ಆಯಾ ಕಾಲೇಜಿಗೆ ಈ ಕುರಿತು ಮಾಹಿತಿ ನೀಡಲಾಗುತ್ತದೆ. ಫಲಿತಾಂಶ ಮುನ್ನ ತಮ್ಮ ರಿಜಿಸ್ಟರ್‌ ನಂಬರನ್ನು ವಿದ್ಯಾರ್ಥಿಗಳು ಖಚಿತಪಡಿಸಿಕೊಳ್ಳಬೇಕು. ಜನರೇಟ್ ಆದ ರಿಜಿಸ್ಟರ್ ನಂಬರ್ ಅನ್ನು ಚೆಕ್‌ ಮಾಡಿ ಖಚಿತಪಡಿಸಿಕೊಳ್ಳಬೇಕು. ಆನಂತರ ಜು.20ರಂದು ವೆಬ್​ಸೈಟ್ ಮೂಲಕ ಫಲಿತಾಂಶ ಪಡೆಯಬಹುದು ಎಂದು ತಿಳಿಸಿದೆ.


Read More

أحدث أقدم