ಕರ್ನಾಟಕದ 20ನೇ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ನಾಳೆ ಬೆಳಿಗ್ಗೆ ಹನ್ನೊಂದು ಗಂಟೆಗೆ ಪ್ರಮಾಣ ವಚನ ಸ್ವೀಕಾರ
ಬೆಂಗಳೂರು : ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆಯಾಗುತ್ತಿದ್ದಂತೇ, ಅವರ ಪದಗ್ರಹಣಕ್ಕೂ ಮುಹೂರ್ತ ಫಿಕ್ಸ್ ಆಗಿದೆ. ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಬಸವರಾಜ ಬೊಮ್ಮಾಯಿಯವರು ನಾಳೆ ಬೆಳಿಗ್ಗೆ 11 ಗಂಟೆಗೆ, ಕರ್ನಾಟಕದ 20ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಈ ಕುರಿತಂತೆ ರಾಜಭವನದ ಬಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಾಳೆ ಬೆಳಿಗ್ಗೆ 11 ಗಂಟೆಗೆ ನಾನೊಬ್ಬನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದೇನೆ. ನನ್ನ ಮೇಲೆ ನಂಬಿಕೆಯಿಟ್ಟು ಮುಖ್ಯಮಂತ್ರಿ ಸ್ಥಾನ ನೀಡಿದಂತ ಯಡಿಯೂರಪ್ಪ ಅವರಿಗೆ, ಬಿಜೆಪಿ ವರಿಷ್ಠರಿಗೆ ನನ್ನ ಧನ್ಯವಾದಗಳು ಎಂದು ತಿಳಿಸಿದರು.
ನಿಯೋಜಿತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯಿಂದ ಹಕ್ಕು ಮಂಡನೆ ಮಾಡಲಾಗಿದೆ. ನೂತನ ಸರ್ಕಾರ ರಚನೆಗೆ ಅವಕಾಶ ನೀಡುವಂತೆ ರಾಜ್ಯಪಾಲ ಥಾವರಚಂದ್ ಗೆಹಲೋತ್ಗೆ ಮನವಿ ಮಾಡಲಾಗಿದೆ.
ಸಿಎಂ ಹೆಸರು ಘೋಷಣೆ ಬೆನ್ನಲ್ಲೇ ಐವರು ನಾಯಕರ ಜೊತೆ ನಿಯೋಜಿತ ಸಿಎಂ ಬೊಮ್ಮಾಯಿ ರಾಜಭವನಕ್ಕೆ ಆಗಮಿಸಿದ್ದರು. ಸರ್ಕಾರ ರಚನೆಗೆ ಹಕ್ಕು ಮಂಡಿಸಲು ಬೊಮ್ಮಾಯಿ ಆಗಮಿಸಿದ್ದರು. ಉಸ್ತುವಾರಿ ಸಿಎಂ ಯಡಿಯೂರಪ್ಪ ಜೊತೆ ರಾಜಭವನಕ್ಕೆ ಬಂದು ನೂತನ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ.