ಕರ್ನಾಟಕಟದ ನೂತನ (30 ನೇ) ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಪ್ರಮಾಣ ವಚನ ಸ್ವೀಕಾರ

ಕರ್ನಾಟಕಟದ ನೂತನ (30 ನೇ) ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಪ್ರಮಾಣ ವಚನ ಸ್ವೀಕಾರ


ಬೆಂಗಳೂರು : ನಿನ್ನೆಯಷ್ಟೇ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ನಿಯೋಜನೆಗೊಂಡಿದ್ದಂತ ಬಸವರಾಜ ಬೊಮ್ಮಾಯಿಯವರು, ರಾಜಭವನದಲ್ಲಿ ನಡೆದಂತ ಸರಳ ಸಮಾರಂಭದಲ್ಲಿ, 30ನೇ ಮುಖ್ಯಮಂತ್ರಿಯಾಗಿ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಇವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿಯನ್ನು ಬೋಧಿಸಿದರು.


ಮುಖ್ಯಮಂತ್ರಿ ಸ್ಥಾನಕ್ಕೆ ಬಿಎಸ್ ಯಡಿಯೂರಪ್ಪ ರಾಜೀನಾಮೆ ನೀಡಿದ ನಂತರ ಈಗ ಕರ್ನಾಟಕ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿಯನ್ನು ನಿನ್ನೆ ನಡೆದ ಬಿಜೆಪಿ ಸಂಸದೀಯ ಮಂಡಳಿಯ ಸಭೆಯಲ್ಲಿ ಒಕ್ಕೊರಲಿನಿಂದ ಘೋಷಣೆ ಮಾಡಲಾಗಿತ್ತು. ಈ ಮೂಲಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿಯವರು ನೇಮಕಗೊಂಡಿದ್ದರು.


ನೂತನ ಮುಖ್ಯಮಂತ್ರಿ ಬಸವರಾಜ್ ಸೋಮಪ್ಪ ಬೊಮ್ಮಾಯಿ ಕುರಿತು


ಬಸವರಾಜ್ ಸೋಮಪ್ಪ ಬೊಮ್ಮಾಯಿಯವರು ಜನವರಿ 28, 1960ರಲ್ಲಿ ಜನಿಸಿದ್ದಾರೆ. ಕರ್ನಾಟಕದ ರಾಜಕಾರಣಿಯಾಗಿದ್ದು, ಅವರು ಕರ್ನಾಟಕದ ಗೃಹ ವ್ಯವಹಾರಗಳು, ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸಕಾಂಗದ ಪ್ರಸ್ತುತ ರಾಜ್ಯ ಸಚಿವರಾಗಿದ್ದಾರೆ. ಹಾವೇರಿ ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. ಅವರು ಈ ಹಿಂದೆ ಕರ್ನಾಟಕ ಸರ್ಕಾರದಲ್ಲಿ ಜಲಸಂಪನ್ಮೂಲ ಮತ್ತು ಸಹಕಾರ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ.


ಅವರು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್.ಆರ್. ಬೊಮ್ಮಾಯಿ ಅವರ ಮಗ. ಮೆಕ್ಯಾನಿಕಲ್ ಎಂಜಿನಿಯರಿಂಗ್ ನಲ್ಲಿ ಪದವಿ ಪಡೆದ ಅವರು ಜನತಾ ದಳದಿಂದ ರಾಜಕೀಯ ಜೀವನವನ್ನು ಪ್ರಾರಂಭಿಸಿದ್ದರು.


ಕರ್ನಾಟಕ ವಿಧಾನ ಪರಿಷತ್ತಿನ ಸದಸ್ಯರಾಗಿ, ಎರಡು ಬಾರಿ (1998 ಮತ್ತು 2004ರಲ್ಲಿ) ಧಾರವಾಡ ಸ್ಥಳೀಯ ಪ್ರಾಧಿಕಾರಗಳ ಕ್ಷೇತ್ರದಿಂದ ಆಯ್ಕೆಯಾದರು. ಅವರು ಜನತಾದಳ (ಯುನೈಟೆಡ್) ತೊರೆದು ಫೆಬ್ರವರಿ, 2008ರಲ್ಲಿ ಭಾರತೀಯ ಜನತಾ ಪಕ್ಷವನ್ನು ಸೇರಿದರು. 2008ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ, ಅವರು ಹಾವೇರಿ ಜಿಲ್ಲೆಯ ಶಿಗ್ಗಾಂವ್ ಕ್ಷೇತ್ರದಿಂದ ಕರ್ನಾಟಕ ವಿಧಾನಸಭೆಗೆ ಆಯ್ಕೆಯಾದರು.


ಪದವೀಧರ ಎಂಜಿನಿಯರ್ ಮತ್ತು ವೃತ್ತಿಯಲ್ಲಿ ಕೃಷಿಕ ಮತ್ತು ಕೈಗಾರಿಕೋದ್ಯಮಿ, ಅವರು ಅಸಂಖ್ಯಾತ ನೀರಾವರಿ ಯೋಜನೆಗಳಿಗೆ ನೀಡಿದ ಕೊಡುಗೆಗಳು ಮತ್ತು ಕರ್ನಾಟಕದ ನೀರಾವರಿ ವಿಷಯಗಳಿಗೆ ಸಂಬಂಧಿಸಿದಂತೆ ಆಳವಾದ ಜ್ಞಾನಕ್ಕಾಗಿ ವ್ಯಾಪಕವಾಗಿ ಮೆಚ್ಚುಗೆ ಪಡೆದರು. ಕರ್ನಾಟಕದ ಹಾವೇರಿ ಜಿಲ್ಲೆಯ ಶಿಗ್ಗಾಂವ್ ನಲ್ಲಿ ಭಾರತದ ಮೊದಲ 100% ಕೊಳವೆ ನೀರಾವರಿ ಯೋಜನೆಯನ್ನು ಜಾರಿಗೊಳಿಸಿದ ಕೀರ್ತಿಯೂ ಅವರಿಗೆ ಸಲ್ಲುತ್ತದೆ.


ಹೀಗೆ ರಾಜಕೀಯ ಹಿನ್ನಲೆ, ಉತ್ತಮ ನಡೆ, ವಿದ್ಯಾರ್ಹತೆ ಹೊಂದಿರುವವರು, ರಾಜಕೀಯ ಅನುಭವ ಹೊಂದಿರುವಂತ ಬಸವರಾಜ ಬೊಮ್ಮಾಯಿಯವರನ್ನು ಬಿಎಸ್ ಯಡಿಯೂರಪ್ಪ ನಂತ್ರ, ಕರ್ನಾಟಕದ 30ನೇ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿತ್ತು. ಇಂತಹ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ರಾಜಭವನದ ಗಾಜಿನ ಅರಮನೆಯಲ್ಲಿ ನಡೆದಂತ ಸರಳ ಸಮಾರಂಭದಲ್ಲಿ, ಪ್ರಮಾಣ ವಚನ ಸ್ವೀಕರಿಸಿದರು. ಇವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿಯನ್ನು ಬೋಧಿಸಿದರು.


Read More

Previous Post Next Post