ಭಾರತದಲ್ಲಿ ಈ ವರೆಗೆ ಕೊವಿಡ್ ಲಸಿಕೆ ಹಾಕಿಸಿಕೊಂಡವರ ಸಂಖ್ಯೆ 36.45 ಕೋಟಿ ಮಂದಿ
ನವದೆಹಲಿ: ಚೀನಾದಿಂದ ಇಡೀ ವಿಶ್ವಕ್ಕೆ ಹರಡಿರುವ ಕೊರೊನಾ ಮಹಾಮಾರಿಯ ಅಟ್ಟಹಾಸಕ್ಕೆ 2 ವರ್ಷ ಸಂದಿದೆ. ಕೊರೊನಾ ಮಹಾಮಾರಿಯ ವಿರುದ್ಧ ಹೋರಾಟಕ್ಕೆ ಭಾರತದಲ್ಲಿ ಕೋವಿಡ್ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ.
ಲಸಿಕೆ ಅಭಿಯಾನ ಶುರುವಾಗಿ ಸುಮಾರು 174 ದಿನಗಳು ಕಳೆದಿವೆ. ಜನವರಿ 16ರಂದು ಮೊದಲ ಬಾರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಲಸಿಕೆ ವಿತರಣೆಗೆ ಅಧಿಕೃತವಾಗಿ ಚಾಲನೆ ನೀಡಿದರು.
ದೇಶದಲ್ಲಿ ನಿನ್ನೆ (ಬುಧವಾರ) ರಾತ್ರಿ 7 ಗಂಟೆ ವೇಳೆಗೆ 31,04,426 ಮಂದಿ ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ವಿತರಿಸಲಾಗಿದೆ. ದೇಶದಲ್ಲಿ ಒಟ್ಟು ಈ ವರೆಗೆ 36,45,69,414 ಮಂದಿಗೆ ಕೊವಿಡ್-19 ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.