ಕರ್ನಾಟಕದಲ್ಲಿ ಮೂರನೇ ಹಂತದ ಲಾಕ್ಡೌನ್ ಸಡಿಲಿಕೆ ಕುರಿತು ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಭೆ ನಡೆಸಲಿದ್ದಾರೆ. ಅನ್ಲಾಕ್ 3.O ಬಗ್ಗೆ ಚರ್ಚೆ ನಡೆಸಲು ಸಚಿವರ ಜೊತೆ ನಿನ್ನೆ ಸಂಜೆ ಸಿಎಂ ಸಭೆ ನಿಗದಿಯಾಗಿತ್ತು. ಆದರೆ, ಆ ಸಭೆಯನ್ನು ಇಂದಿಗೆ ಮುಂದೂಡಲಾಗಿದೆ.
ಆದರೆ, ಕೊರೋನಾ ತಜ್ಞರ ಸಮಿತಿ, ನೆರೆಯ ರಾಜ್ಯಗಳಲ್ಲಿ ಕೊರೋನಾ ಹಾವಳಿ ಹೆಚ್ಚಾಗಿದೆ. ಹೀಗಾಗಿ, ಕರ್ನಾಟಕದಲ್ಲಿ ಸಂಪೂರ್ಣವಾಗಿ ಅನ್ಲಾಕ್ ಘೋಷಿಸಿದರೆ ಮುಂದೆ ಮತ್ತೆ ಕೊರೋನಾ ಹೆಚ್ಚಾಗುವ ಸಾಧ್ಯತೆಯಿದೆ. ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂಗಳನ್ನಾದರೂ ಮುಂದುವರೆಸುವುದು ಉತ್ತಮ. ಹಾಗೇ, ಹೊರ ರಾಜ್ಯಗಳಿಂದ ಬರುವವರ ಮೇಲೆ ನಿಗಾ ಇಡುವುದು ಒಳ್ಳೆಯದು ಎಂದು ಸಲಹೆ ನೀಡಿದ್ದಾರೆ ಎನ್ನಲಾಗಿದೆ.
ಮಂಗಳೂರು: ಕೇರಳದಲ್ಲಿ ಡೆಲ್ಟಾ ಪ್ಲಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಕರ್ನಾಟಕ- ಕೇರಳ ಗಡಿಯಲ್ಲಿ ಇನ್ನಷ್ಟು ಕಟ್ಟುನಿಟ್ಟಿನ ತಪಾಸಣೆ ಮಾಡಲಾಗುತ್ತಿದೆ. ಮಂಗಳೂರಿನ ತಲಪಾಡಿ ಗಡಿಯಲ್ಲಿ ಪೊಲೀಸರು ತಪಾಸಣೆ ತೀವ್ರಗೊಳಿಸಿದ್ದು, ಕೇರಳದಿಂದ ಆಗಮಿಸುವ ಎಲ್ಲಾ ವಾಹನಗಳ ತೀವ್ರ ತಪಾಸಣೆ ಮಾಡಲಾಗುತ್ತಿದೆ.
ಗಡಿಯಲ್ಲಿ ಪೊಲೀಸರ ವಾಹನ ತಪಾಸಣೆಯಿಂದ ವಾಹನಗಳು ಸಾಲು ನಿಂತಿದ್ದು, 72 ಗಂಟೆಗಳ ಒಳಗಿನ ನೆಗೆಟಿವ್ ರಿಪೋರ್ಟ್ ಇಲ್ಲದವರಿಗೆ ಗಡಿಯಲ್ಲೇ Random ಟೆಸ್ಟ್ ಮಾಡಲಾಗುತ್ತಿದೆ. ಆರೋಗ್ಯ ಇಲಾಖೆಯ ಎರಡು ತಂಡದಿಂದ ಗಡಿಯಲ್ಲಿ Random ಟೆಸ್ಟ್ ಮಾಡಲಾಗುತ್ತಿದೆ.
ನಿತ್ಯ ಉದ್ಯೋಗ, ವ್ಯವಹಾರಕ್ಕೆ ಬರುವವರಿಗೆ ಇಂದಿನಿಂದ 15 ದಿನಗಳಿಗೊಮ್ಮೆ ರಿಪೋರ್ಟ್ ಸಲ್ಲಿಕೆ ಕಡ್ಡಾಯವಾಗಿದ್ದು, ತಲಪಾಡಿ ಗಡಿಯಲ್ಲಿ ಬೈಕ್, ಕಾರುಗಳ ತೀವ್ರ ತಪಾಸಣೆಯನ್ನು ಪೊಲೀಸರು ಮಾಡುತ್ತಿದ್ದಾರೆ. ರಿಪೋರ್ಟ್ ಇಲ್ಲದೇ ಮಂಗಳೂರು ಪ್ರವೇಶಕ್ಕೆ ಪೊಲೀಸರು ತಡೆ ಮಾಡಿದ್ದು, ಟೆಸ್ಟ್ ಮಾಡಿಸಿದ ಬಳಿಕವೇ ಮಂಗಳೂರಿಗೆ ಹೋಗಲು ಅವಕಾಶ ಕಲ್ಪಿಸಲಾಗಿದೆ.
ಹೆಚ್ಚಿನ ಸುದ್ದಿಗಾಗಿ Click Here