ಇಂದು ಸಂಜೆ 7 ಗಂಟೆಗೆ ಬಿಜೆಪಿ ಪಕ್ಷದ ಶಾಸಕಾಂಗ ಸಭೆ ಫಿಕ್ಸ್- ಇಂದೇ ಹೊಸ ಮುಖ್ಯಮಂತ್ರಿ ಆಯ್ಕೆ ಸಾದ್ಯತೆ

ಇಂದು ಸಂಜೆ 7 ಗಂಟೆಗೆ ಬಿಜೆಪಿ ಪಕ್ಷದ ಶಾಸಕಾಂಗ ಸಭೆ ಫಿಕ್ಸ್- ಇಂದೇ ಹೊಸ ಮುಖ್ಯಮಂತ್ರಿ ಆಯ್ಕೆ ಸಾದ್ಯತೆ


ಬೆಂಗಳೂರು: ಯಡಿಯೂರಪ್ಪ ರಾಜೀನಾಮೆಯಿಂದ ತೆರವುಗೊಂಡಿರುವ ಕರ್ನಾಟಕ ರಾಜ್ಯ ಮುಖ್ಯಮಂತ್ರಿ ಹುದ್ದೆಗೆ ಹೊಸಬರನ್ನು ನೇಮಿಸುವ ಕುರಿತು ಇಂದೇ ಅಂತಿಮ ತೀರ್ಮಾನ ಹೊರಬೀಳುವ ಸಾಧ್ಯತೆ ದಟ್ಟವಾಗಿದೆ. ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಇಂದು ಸಂಜೆ 7 ಗಂಟೆಗೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಿಗದಿಯಾಗಿದ್ದು, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಸಹ ಉಸ್ತುವಾರಿ ಡಿ.ಕೆ.ಅರುಣ, ಕೇಂದ್ರೀಯ ವೀಕ್ಷಕ ಕಿಶನ್ ರೆಡ್ಡಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಸಭೆಯಲ್ಲಿ ಭಾಗಿಯಾಗಲಿದ್ದಾರೆ.


ಬೆಂಗಳೂರಿನ ಕ್ಯಾಪಿಟಲ್ ಹೊಟೇಲ್​ನಲ್ಲಿ ನಡೆಯಲಿರುವ ಸಭೆಯಲ್ಲಿ ಪಕ್ಷದ ಮುಖಂಡರು ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಹೆಸರನ್ನು ಅಂತಿಮಗೊಳಿಸುವ ಸಾಧ್ಯತೆ ಇದೆ ಎನ್ನಲಾಗಿದ್ದು, ರಾತ್ರಿಯ ಒಳಗೆ ನಿರ್ಧಾರ ಹೊರಬೀಳುವ ನಿರೀಕ್ಷೆ ಇದೆ.


 ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಬಿಜೆಪಿಯಲ್ಲಿ ನೂತನ ನಾಯಕನ ಆಯ್ಕೆಗೆ ಕಸರತ್ತು ಆರಂಭವಾಗಿದೆ. ಸಿಎಂ ಕುರ್ಚಿ ರೇಸ್ ನಲ್ಲಿ ಈಗಾಗಲೇ ಮೂರು- ನಾಲ್ಕು ಜನರ ಹೆಸರು ಕೇಳಿಬರುತ್ತಿದ್ದು, 'ಇವರ್ ಬಿಟ್ಟು ಅವರ್ ಬಿಟ್ಟು ಮತ್ಯಾರು' ಎಂಬ ಪರಿಸ್ಥಿತಿಗೆ ಬಂದಿದೆ.


ಶಾಸಕಾಂಗ ಸಭೆಯು ಇಂದು ಸಂಜೆಯೇ ನಡೆಯುವ ಕಾರಣ ಇಂದೇ ನೂತನ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಮಾಡುವ ಸಾಧ್ಯತೆ ಹೆಚ್ಚಳವಾಗಿದೆ.

Previous Post Next Post