ಕೇರಳದಿಂದ ಕರ್ನಾಟಕಕ್ಕೆ ಬರುವ ಪ್ರಯಾಣಿಕರು 72 ಗಂಟೆಗಳ ಒಳಗೆ ಆರ್‍ಟಿಪಿಸಿಆರ್ ಪರೀಕ್ಷೆ ಮಾಡಿದ ನೆಗೆಟಿವ್ ವರದಿ ಹೊಂದಿರುವುದು ಕಡ್ಡಾಯ: ರಾಜ್ಯ ಸರಕಾರದ ಆದೇಶ

ಕೇರಳದಿಂದ ಕರ್ನಾಟಕಕ್ಕೆ ಬರುವ ಪ್ರಯಾಣಿಕರು 72 ಗಂಟೆಗಳ ಒಳಗೆ ಆರ್‍ಟಿಪಿಸಿಆರ್ ಪರೀಕ್ಷೆ ಮಾಡಿದ ನೆಗೆಟಿವ್ ವರದಿ ಹೊಂದಿರುವುದು ಕಡ್ಡಾಯ: ರಾಜ್ಯ ಸರಕಾರದ ಆದೇಶ 


ಬೆಂಗಳೂರು, ಜು.1: ನೆರೆಯ ಕೇರಳ ರಾಜ್ಯದಲ್ಲಿ ದಿನೇ ದಿನೇ ಕೋವಿಡ್ ಸೋಂಕಿನ ಡೆಲ್ಟಾ ಪ್ಲಸ್ ಪ್ರಕರಣಗಳು ಅಧಿಕವಾಗುತ್ತಿರುವುದು ಹಾಗೂ ಸಂಭಾವ್ಯ ಮೂರನೆ ಅಲೆ ಅಲ್ಲಿ ಸದ್ಯದಲ್ಲೇ ಕಾಣಿಸಿಕೊಳ್ಳುವ ಕಾರಣಕ್ಕೆ ಕೇರಳ ರಾಜ್ಯದಿಂದ ಬರುವ ವ್ಯಕ್ತಿಗಳ ಮೇಲೆ ಕಟ್ಟುನಿಟ್ಟಾಗಿ ಕಣ್ಗಾವಲು ಇಡಲು ರಾಜ್ಯ ಸರಕಾರ ಮುಂದಾಗಿದೆ.


ಗುರುವಾರ ಈ ಸಂಬಂಧ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಅವರು ಆದೇಶ ಹೊರಡಿಸಿದ್ದು, ಕೇರಳದಿಂದ ಕರ್ನಾಟಕಕ್ಕೆ ಬರುವ ಪ್ರಯಾಣಿಕರು 72 ಗಂಟೆಗಳ ಒಳಗೆ ಆರ್‍ಟಿಪಿಸಿಆರ್ ಪರೀಕ್ಷೆ ಮಾಡಿದ ನೆಗೆಟಿವ್ ವರದಿ ಹೊಂದಿರುವುದು ಕಡ್ಡಾಯ ಎಂದು ತಿಳಿಸಿದ್ದಾರೆ.


ವಿಮಾನ, ಬಸ್ಸು, ಟ್ಯಾಕ್ಸಿ ಮತ್ತು ಸ್ವಂತ ವಾಹನಗಳ ಮೂಲ️ಕ ರಾಜ್ಯಕ್ಕೆ ಬರುವ ಪ್ರಯಾಣಿಕರು 72 ಗಂಟೆಗಳ ಹಿಂದೆ ಮಾಡಿಸಿದ ಆರ್‍ಟಿಪಿಸಿಆರ್ ನೆಗೆಟಿವ್ ಪರೀಕ್ಷಾ ವರದಿ ಇರಬೇಕು. ಇಲ್ಲದಿದ್ದರೆ, ಕನಿಷ್ಠ ಒಂದು ಡೋಸ್ ಕೋವಿಡ್ ಲ️ಸಿಕೆ ಪಡೆದಿರುವ ಕುರಿತು ಪ್ರಮಾಣ ಪತ್ರ ಹೊಂದಿರಬೇಕು ಎಂದು ಹೇಳಿದ್ದಾರೆ.


ವಿಮಾನಯಾನ ಸಂಸ್ಥೆಗಳು 72 ಗಂಟೆಗಳ ಹಿಂದೆ ಮಾಡಿಸಿದ ಆರ್‍ಟಿಪಿಸಿಆರ್ ನೆಗೆಟಿವ್ ಪರೀಕ್ಷಾ ವರದಿ ಅಥವಾ ಕನಿಷ್ಠ ಒಂದು ಡೋಸ್ ಕೋವಿಡ್ ಲ️ಸಿಕೆ ಪಡೆದಿರುವ ಕುರಿತು ಪ್ರಮಾಣ ಪತ್ರ ಹೊಂದಿರುವವರಿಗೆ ಮಾತ್ರ ಬೋರ್ಡಿಂಗ್ ಪಾಸ್ ನೀಡಬೇಕು. ಅದೇ ರೀತಿ, ರೈಲ್ವೆ ಪ್ರಾಧಿಕಾರವು ರೈಲಿನಲ್ಲಿ ಪ್ರಯಾಣಿಸುವ ಎಲ್ಲಾ ಪ್ರಯಾಣಿಕರು ಆರ್‍ಟಿಪಿಸಿಆರ್ ನೆಗೆಟಿವ್ ಪರೀಕ್ಷಾ ವರದಿ ಅಥವಾ ಕನಿಷ್ಠ ಒಂದು ಡೋಸ್ ಕೋವಿಡ್ ಲ️ಸಿಕೆ ಪಡೆದಿರುವ ಕುರಿತು ಪ್ರಮಾಣ ಪತ್ರ ಹೊಂದಿರುವುದನ್ನು ಖಚಿತಪಡಿಸಬೇಕು ಎಂದು ಸೂಚಿಸಿದ್ದಾರೆ.


ಬಸ್‍ಗಳಲ್ಲಿ ಪ್ರಯಾಣಿಕರನ್ನು ಹತ್ತಿಸಿಕೊಳ್ಳುವ ಮೊದಲೇ ಆರ್‍ಟಿಪಿಸಿಆರ್ ನೆಗೆಟಿವ್ ಪರೀಕ್ಷಾ ವರದಿ ಅಥವಾ ಕನಿಷ್ಠ ಒಂದು ಡೋಸ್ ಕೋವಿಡ್ ಲ️ಸಿಕೆ ಪಡೆದಿರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು. ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಕೊಡಗು, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳ ಮೂಲ️ಕ ರಾಜ್ಯಕ್ಕೆ ಪ್ರವೇಶಿಸುವ ವಾಹನಗಳ ಚಾಲ️ಕರು, ಸಹಾಯಕರು, ಪ್ರಯಾಣಿಕರು ನೆಗೆಟಿವ್ ಪರೀಕ್ಷಾ ವರದಿ ಅಥವಾ ಕನಿಷ್ಠ ಒಂದು ಡೋಸ್ ಕೋವಿಡ್ ಲ️ಸಿಕೆ ಪಡೆದಿರುವ ಪ್ರಮಾಣ ಪತ್ರ ಪರಿಶೀಲಿಸಲು ಚೆಕ್ ಪೋಸ್ಟ್ ಗಳಲ್ಲಿ ಅಗತ್ಯ ಸಿಬ್ಬಂದಿಯನ್ನು ಜಿಲ್ಲಾಧಿಕಾರಿಗಳು ನಿಯೋಜಿಸಬೇಕು ಎಂದು ಪಿ.ರವಿಕುಮಾರ್ ತಿಳಿಸಿದರು.


ರಾಜ್ಯಕ್ಕೆ ಅಲ್ಪಾವಧಿಗೆ ಬರುವವರು ಮತ್ತು ವಿದ್ಯಾರ್ಥಿಗಳಿಗೂ ಮೇಲಿನ ನಿಯಮ ಅನ್ವಯವಾಗುತ್ತದೆ ಎಂದಿರುವ ಅವರು, ಕನಿಷ್ಠ ಒಂದು ಡೋಸ್ ಕೋವಿಡ್ ಲ️ಸಿಕೆ ಪಡೆದಿರುವ ಪ್ರಮಾಣ ಪತ್ರ ಹೊಂದಿರುವವರು ಆರ್‍ಟಿಪಿಸಿಆರ್ ನೆಗೆಟಿವ್ ಟೆಸ್ಟ್ ವರದಿ ತರಬೇಕಾಗಿಲ್ಲ. ಅದೇ ರೀತಿ, ಎರಡು ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಈ ನಿಯಮಗಳಿಂದ ವಿನಾಯಿತಿ ನೀಡಲಾಗಿದೆ ಎಂದರು.


ಮರಣ ಮತ್ತು ವೈದ್ಯಕೀಯ ತುರ್ತು ಸಂದರ್ಭಗಳಲ್ಲಿ ಬರುವವರಿಗೆ ಗಂಟಲ️ ದ್ರವ ಮಾದರಿಯನ್ನು ರಾಜ್ಯದಲ್ಲಿ ಸಂಗ್ರಹಿಸಿ, ಕೋವಿಡ್ ಶಿಷ್ಟಾಚಾರವನ್ನು ಪಾಲಿಸಬೇಕು. ಗಡಿಭಾಗಗಳಲ್ಲಿ ಚೆಕ್ ಪೋಸ್ಟ್‍ಗಳಲ್ಲಿ ಅಗತ್ಯ ಸಿಬ್ಬಂದಿಯನ್ನು ಜಿಲ್ಲಾಧಿಕಾರಿಗಳು ನಿಯೋಜಿಸಬೇಕು ಎಂದು ಆದೇಶದಲ್ಲಿ ಉಲ್ಲೇಖಿಸಿದ್ದಾರೆ.

Previous Post Next Post