ರಾಜ್ಯದಲ್ಲಿ ವಿಕೆಂಡ್ ಕರ್ಫ್ಯೂ ಜಾರಿಯಲ್ಲಿದೆ. ಮರೆಯಬೇಡಿ
ವೀಕೆಂಡ್ ಕರ್ಫ್ಯೂ, ದಕ ಜಿಲ್ಲೆಯ ಜನರಿಗೆ ಈ ನಿಯಮ ಪಾಲನೆ ಕಡ್ಡಾಯ
ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿಯಾಲ್ಲಿದ್ದು, ಅಗತ್ಯ ವಸ್ತುಗಳ ಅಂಗಡಿಗಳು ಶನಿವಾರ ಮತ್ತು ಭಾನುವಾರ ಬೆಳಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆವರೆಗೆ ತೆರೆದಿರಲಿವೆ. ಉಳಿದ ಯಾವುದೇ ಚಟುವಟಿಕೆಗಳಿಗೆ, ಅಂಗಡಿಗಳಿಗೆ ಅವಕಾಶವಿಲ್ಲ. ಶನಿವಾರ ಮತ್ತು ರವಿವಾರ ವೀಕೆಂಡ್ ಕರ್ಫ್ಯೂ ಸಮಯದಲ್ಲಿ ಮಧ್ಯಾಹ್ನ 2 ಗಂಟೆಯವರೆಗೆ ದಿನಸಿ, ತರಕಾರಿ, ಹಾಲು, ಹಣ್ಣು ಮೀನು, ಮಾಂಸ ಅಂಗಡಿಗಳನ್ನು ತೆರೆಯಲು ಅವಕಾಶ ಕಲ್ಪಿಸಲಾಗಿದೆ, ದಕ್ಷಿಣ ಕನ್ನಡ ಜಿಲ್ಲೆಯ ಜನರನ್ನು ಈ ನಿಯಮವನ್ನು ಕಟ್ಟು ನಿಟ್ಟಾಗಿ ಪಾಲಿಸಬೇಕು ಎಂದು ಎಂದು ಜಿಲ್ಲಾಡಳಿತ ತಿಳಿಸಿದೆ.