ಕಾವೇರಿಯಲ್ಲಿ ಗರಿಗೆದರಿದ ರಾಜಕೀಯ: ಸಿಎಂ ನಿವಾಸಕ್ಕೆ ದೌಡಾಯಿಸಿದ ಆಪ್ತ ಸಚಿವರು ಶಾಸಕರು

ಕಾವೇರಿಯಲ್ಲಿ ಗರಿಗೆದರಿದ ರಾಜಕೀಯ: ಸಿಎಂ ನಿವಾಸಕ್ಕೆ ದೌಡಾಯಿಸಿದ ಆಪ್ತ ಸಚಿವರು ಶಾಸಕರು 


ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವದಂತಿ ಬೆನ್ನಲ್ಲೇ ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಸಿಎಂ ಆಪ್ತ ಸಚಿವರು ಹಾಗೂ ಶಾಸಕರು ಸಿಎಂ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.


ಸಿಎಂ ಬದಲಾವಣೆ ಚರ್ಚೆ ಬೆನ್ನಲ್ಲೇ ಗಣಿ ಸಚಿವ ಮುರುಗೇಶ್ ನಿರಾಣಿ, ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಡಿಸಿಎಂ ಗೋವಿಂದ ಕಾರಜೋಳ, ವಿ.ಸೋಮಣ್ಣ ಸಿಎಂ ನಿವಾಸಕ್ಕೆ ದೌಡಾಯಿಸಿದ್ದು, ಮಹತ್ವದ ಚರ್ಚೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ.


ಇದೇ ವೇಳೆ ಸಿಎಂ ಆಪ್ತ ಶಾಸಕರಾದ ಸೋಮಶೇಖರ ರೆಡ್ಡಿ, ಅಮೃತ ದೇಸಾಯಿ, ಮಾಡಾಳು ವಿರುಪಾಕ್ಷಪ್ಪ ಮೊದಲಾದವರು ಕೂಡ ಸಿಎಂ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.


ಸಿಎಂ ಬದಲಾವಣೆ ಸುದ್ದಿ ಬಿಎಸ್ ವೈ ಬೆಂಬಲಕ್ಕೆ ನಿಂತ ಮಠಾಧೀಶರು , 30 ಕ್ಕೂ ಹೆಚ್ಚು ಸ್ವಾಮೀಜಿಗಳಿಂದ ಯಡಿಯೂರಪ್ಪ ಭೇಟಿ 


ಬೆಂಗಳೂರು: ಸಿಎಂ ಬದಲಾವಣೆ ವದಂತಿಗಳ ನಡುವೆ ರಾಜ್ಯ ರಾಜಕೀಯ ಚಟುವಟಿಗೆಗಳು ಗರಿ ಗೆದರಿದ ಬೆನ್ನಲ್ಲೆ ಇದೀಗ ಮಠಾಧೀಶರು ಮುಖ್ಯಮಂತ್ರಿ ಯಡಿಯೂರಪ್ಪ ಬೆಂಬಲಕ್ಕೆ ನಿಂತಿದ್ದು, 30ಕ್ಕೂ ಹೆಚ್ಚು ಸ್ವಾಮೀಜಿಗಳು ಯಡಿಯೂರಪ್ಪ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.


ಬಾಲೇಹೊಸೂರಿನ ದಿಂಗಾಲೆಶ್ವರ ಶ್ರೀ ನೇತೃತ್ವದಲ್ಲಿ ಬೋವಿ ಮಠದ ಇಮ್ಮಡಿ ಸಿದ್ದೇಶ್ವರ ಸ್ವಾಮೀಜಿ, ಮಾದಾರ ಮಠದ ಬಸವಮೂರ್ತಿ ಸ್ವಾಮೀಜಿ, ಶಿವಯೋಗಾಶ್ರಮದ ಶರಣಬಸವ ಸ್ವಾಮೀಜಿ ಸೇರಿದಂತೆ ಉತ್ತರ ಕರ್ನಾಟಕ ಭಾಗದ ಸ್ವಾಮೀಜಿಗಳು ಸೇರಿದಂತೆ ಹಲವು ಮಠಾಧೀಶರು ಸಿಎಂ ಅಧಿಕೃತ ನಿವಾಸ ಕಾವೇರಿಗೆ ಭೇಟಿ ನೀಡಿದ್ದು, ಸಿಎಂ ಯಡಿಯೂರಪ್ಪ ಜೊತೆ ಚರ್ಚೆ ನಡೆಸಿದ್ದಾರೆ. ನನ್ನ ಕೈಯಲ್ಲಿ ಏನೂ ಇಲ್ಲ, ಎಲ್ಲವೂ ಹೈಕಮಾಂಡ್ ತೀರ್ಮಾನ ಎಂದು ಸಿಎಂ ಸ್ವಾಮೀಜಿಗಳಿಗೆ ತಿಳಿಸಿದ್ದಾರೆಂದು ತಿಳಿದು ಬಂದಿದೆ. 

Previous Post Next Post