ದಕ ಜಿಲ್ಲೆಯಲ್ಲಿ ಮಸಿದಿ ಮಂದಿರ ಚರ್ಚ್ ಸಹಿತ ಧಾರ್ಮಿಕ ಕೇಂದ್ರಗಳನ್ನು ತೆರೆಯಬಹುದು: ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ

ದಕ ಜಿಲ್ಲೆಯಲ್ಲಿ ಮಸಿದಿ ಮಂದಿರ ಚರ್ಚ್ ಸಹಿತ ಧಾರ್ಮಿಕ ಕೇಂದ್ರಗಳನ್ನು ತೆರೆಯಬಹುದು: ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ


ಮಂಗಳೂರು: ರಾಜ್ಯ ಸರಕಾರವು ಹೊರಡಿಸಿದ ಹೊಸ ಮಾರ್ಗಸೂಚಿಯ ಅನ್ವಯ ಜು.5ರ ಸೋಮವಾರದಿಂದ ಮಸೀದಿ, ಮಂದಿರ, ಚರ್ಚ್ ಸಹಿತ ಧಾರ್ಮಿಕ ಕೇಂದ್ರಗಳನ್ನು ತೆರೆಯಬಹುದಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.


ಧಾರ್ಮಿಕ ಕೇಂದ್ರಗಳಲ್ಲಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ರಾಜ್ಯ ಸರಕಾರ ತಿಳಿಸಿದೆ. ಅದರಂತೆ ಮಸೀದಿ, ಮಂದಿರ, ಚರ್ಚ್‌ಗಳನ್ನು ತೆರೆಯಬಹುದಾಗಿದೆ. ಆದರೆ ಕೋವಿಡ್-19 ಮಾರ್ಗಸೂಚಿಯನ್ನು ಯಥಾವತ್ತಾಗಿ ಪಾಲಿಸಬೇಕು. ಯಾವುದೇ ಕಾರಣಕ್ಕೂ ಕೋವಿಡ್ ಸೋಂಕಿನ ಬಗ್ಗೆ ನಿರ್ಲಕ್ಷ್ಯ ಮಾಡಬಾರದು ಎಂದು ಜಿಲ್ಲಾಧಿಕಾರಿ ಸೂಚಿಸಿದ್ದಾರೆ.


ಮಸೀದಿ ಮತ್ತು ಚರ್ಚ್ ಮಂದಿರಗಳಲ್ಲಿ ಮಾಸ್ಕ್ ಧರಿಸಿ, ವ್ಯಕ್ತಿಗತ ಅಂತರ ಕಾಯ್ದುಕೊಂಡು ಕೋವಿಡ್ ಮಾರ್ಗಸೂಚಿ ಪಾಲಿಸಿ ಧಾರ್ಮಿಕ ಪ್ರಾರ್ಥನೆಗೆ ಅವಕಾಶ ಕಲ್ಪಿಸಲಾಗಿದೆ.


3.O ಅನ್ ಲಾಕ್ ಮಾರ್ಗಸೂಚಿ ಪಾಲನೆ: ದಕ ಜಿಲ್ಲಾಧಿಕಾರಿ ಸ್ಪಷ್ಟನೆ, ಜುಲೈ 5 ರಿಂದ ನಿರ್ಭಂದ ಸಡಿಲಿಕೆ, ಜುಲೈ 4ರ ರವಿವಾರ ವೀಕೆಂಡ್ ಕರ್ಫ್ಯೂ ಇದೆ


ಮಂಗಳೂರು: ಈಗಾಗಲೆ ರಾಜ್ಯ ಸರಕಾರವು ಜು.5ರಿಂದ ಅನ್ವಯಗೊಂಡಂತೆ ಲಾಕ್‌ಡೌನ್‌ನಲ್ಲಿ ಸಾಕಷ್ಟು ಸಡಿಲಿಕೆ ಮಾಡಿದೆ. ಅದನ್ನು ದ.ಕ.ಜಿಲ್ಲೆಯಲ್ಲೂ ಯಥಾವತ್ತಾಗಿ ಪಾಲಿಸಲಾಗುವುದು ಎಂದು ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ.ತಿಳಿಸಿದ್ದಾರೆ.


ಜು.4ರ ರವಿವಾರ ವೀಕೆಂಡ್ ಕರ್ಫ್ಯೂ ಇದೆ. ಆದರೆ ಈಗಾಗಲೆ ತಿಳಿಸಿದಂತೆ ರವಿವಾರ ಬೆಳಗ್ಗೆ 6ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗುವುದು. ಜು.5ರ ಬೆಳಗ್ಗೆ 5ರಿಂದ ಜು.19ರ ಬೆಳಗ್ಗೆ 5ರವರೆಗೆ ರಾಜ್ಯ ಸರಕಾರ ಹೊರಡಿಸಿದ ಸಡಿಲಿಕೆ ಮತ್ತು ನಿರ್ಬಂಧಗಳು ಜಿಲ್ಲೆಯಲ್ಲಿ ಮುಂದುವರಿಯಲಿದೆ ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದಾರೆ.


ಹೆಚ್ಚಿನ ಸುದ್ದಿ ಓದಿ

Previous Post Next Post