ನಾಳೆಯಿಂದ ರಾಜ್ಯಾದ್ಯಂತ ಕಾಲೇಜುಗಳು ಆರಂಭ: ತರಗತಿ ಹಾಜರಿಗೆ ಈ ನಿಯಮ ಕಡ್ಡಾಯ

ನಾಳೆಯಿಂದ ರಾಜ್ಯಾದ್ಯಂತ ಕಾಲೇಜುಗಳು ಆರಂಭ: ತರಗತಿ ಹಾಜರಿಗೆ ಈ ನಿಯಮ ಕಡ್ಡಾಯ  


ಬೆಂಗಳೂರು : ಜುಲೈ 26ರ ನಾಳೆಯಿಂದ ಪದವಿ (Degree), ಸ್ನಾತಕೋತ್ತರ ಪದವಿ (PG, ಮತ್ತು ಬಿ.ಎಡ್ (B.Ed) ಆಫ್‍ಲೈನ್ ತರಗತಿಗಳು ಪುನರಾರಂಭಗೊಳ್ಳಲಿವೆ. ಇಂತಹ ಪದವಿ, ಸ್ನಾತಕೋತ್ತರ ಪದವಿ ತರಗತಿಗಳಿಗೆ ಹಾಜರಾಗುವಂತ ವಿದ್ಯಾರ್ಥಿಗಳು, ಭೋದಕ, ಬೋಧಕೇತರ ಸಿಬ್ಬಂದಿಗಳು, ಕಡ್ಡಾಯವಾಗಿ ರಾಜ್ಯ ಸರ್ಕಾರದ ಕೆಲ ನಿಯಮಗಳ ಪಾಲನೆ ಮಾಡಬೇಕಿದೆ. ನಾಳೆಯಿಂದ ರಾಜ್ಯಾಧ್ಯಂತ ಓಪನ್ ಆಗಲಿರುವಂತ ಕಾಲೇಜಿಗೆ ತೆರಳೋದಕ್ಕೆ ಯಾವೆಲ್ಲಾ ನಿಯಮವಿದೆ ಎನ್ನುವ ಬಗ್ಗೆ ಮುಂದೆ ಓದಿ.


ಕೊರೋನಾ ಸೋಂಕಿನ ಭೀತಿಯಿಂದ ಬಂದ್ ಆಗಿದ್ದಂತ ಕಾಲೇಜುಗಳು ನಾಳೆಯಿಂದ ತೆರೆಯೋದಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಿದೆ. ಕೊರೋನಾ ಪಾಸಿಟಿವಿಟಿ ದರ ಕಡಿಮೆ ಆಗಿದ್ದರಿಂದಾಗಿ ಅನುಮತಿಸಿದ್ದರೂ, ಕೊರೋನಾ ಮುಂಜಾಗ್ರತಾ ಕ್ರಮಗಳ ಪಾಲನೆ ಕಡ್ಡಾಯಗೊಳಿಸಿದೆ. ಹೀಗಾಗಿ ನಾಳೆಯಿಂದ ಪದವಿ, ಸ್ನಾತಕೋತ್ತರ ಪದವಿ ಸೇರಿದಂತೆ ವಿವಿಧ ತರಗತಿಗಳಿಗೆ ಹಾಜರಾಗುವಂತ ವಿದ್ಯಾರ್ಥಿಗಳು ಕನಿಷ್ಠ ಪ್ರಥಮ ಡೋಸ್ ಕೋವಿಡ್ ಲಸಿಕೆಯನ್ನು ಕಡ್ಡಾಯವಾಗಿ ಪಡೆದು ಹಾಜರಾಗಬೇಕಿದೆ.


ಪದವಿ ಕಾಲೇಜುಗಳ ಪ್ರಾರಂಭಕ್ಕೆ ಮಾರ್ಗಸೂಚಿಗಳೇನು?

 • ಕಾಲೇಜಿಗೆ ಬರುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಒಂದು ಡೋಸ್ ಲಸಿಕೆ ಹಾಕಿಸಿಕೊಂಡಿರಬೇಕು.
 • ಲಸಿಕೆ ಪಡೆಯದ ವಿದ್ಯಾರ್ಥಿಗಳಿಗೆ ಕಾಲೇಜಿಗೆ ಪ್ರವೇಶ ಇಲ್ಲ.
 • ಸ್ವ ಇಚ್ಛೆಯಿಂದ ವಿದ್ಯಾರ್ಥಿಗಳು ಕಾಲೇಜಿಗೆ ಬರಬೇಕು.
 • ಕಾಲೇಜು ಪ್ರಾರಂಭವಾದರೂ ಆನ್ಲೈನ್ ತರಗತಿಗಳು ಎಂದಿನಂತೆ ನಡೆಯಲಿದೆ.
 • ಅಧ್ಯಾಪಕರ ವರ್ಗ ಮತ್ತು ಸಿಬ್ಬಂದಿ ವರ್ಗ ಕಡ್ಡಾಯವಾಗಿ ಒಂದು ಡೋಸ್ ಲಸಿಕೆ ಹಾಕಿಸಿಕೊಂಡಿರಬೇಕು.
 • ಪ್ರತಿ ಕಾಲೇಜಿನಲ್ಲೂ ಕಡ್ಡಾಯವಾಗಿ ಕೊರೊನಾ ಮಾರ್ಗಸೂಚಿಯನ್ನು ಪಾಲಿಸಬೇಕು.
 • ಕಾಲೇಜಿಗೆ ಬರುವ ವಿದ್ಯಾರ್ಥಿಗಳಿಗೆ ನಿತ್ಯ ಥರ್ಮಲ್ ಸ್ಕ್ಯಾನಿಂಗ್ ನಡೆಸಬೇಕು.
 • ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳು ಕಾಲೇಜು, ಕ್ಯಾಂಪಸ್ನಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು.
 • ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಕಾಲೇಜು ಆಡಳಿತ ಮಂಡಳಿ ಕ್ರಮವಹಿಸಬೇಕು.
 • ಕಾಲೇಜು, ವಿವಿ ಆವರಣದಲ್ಲಿ ಆರೋಗ್ಯ ಸಹಾಯವಾಣಿ ಪ್ರಾರಂಭ ಮಾಡಬೇಕು.
 • ಕಾಲೇಜು, ವಿವಿಗಳಲ್ಲಿ ಈಜುಕೊಳಗಳ ಪ್ರಾರಂಭಕ್ಕೆ ನಿಷೇಧ.
 • ಗ್ರಂಥಾಲಯಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಕ್ರಮವಹಿಸಬೇಕು.
 • ಕ್ರೀಡಾ ಚಟುವಟಿಕೆಗಳಿಗೆ ಸರ್ಕಾರ ನಿಗದಿ ಮಾಡಿರುವ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಬೇಕು.

Previous Post Next Post