ಯಡಿಯೂರಪ್ಪ ರಾಜಿನಾಮೆ ಅಂಗೀಕಾರ, ಮುಂದಿನ ಸಿಎಂ ಘೋಷಣೆ ವರೆಗೆ ಹಂಗಾಮಿ ಸಿಎಂ ಆಗಿ ಯಡಿಯೂರಪ್ಪ ಮುಂದುವರಿಕೆ

ಯಡಿಯೂರಪ್ಪ ರಾಜಿನಾಮೆ ಅಂಗೀಕಾರ, ಮುಂದಿನ ಸಿಎಂ ಘೋಷಣೆ ವರೆಗೆ ಹಂಗಾಮಿ ಸಿಎಂ ಆಗಿ ಯಡಿಯೂರಪ್ಪ ಮುಂದುವರಿಕೆ


ಬೆಂಗಳೂರು, ಜುಲೈ 26: ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡುವುದಾಗಿ ಬಿ.ಎಸ್.ಯಡಿಯೂರಪ್ಪ ಸೋಮವಾರ ಬೆಳಿಗ್ಗೆ ಘೋಷಣೆ ಮಾಡಿದ್ದು, ರಾಜಭವನಕ್ಕೆ ತೆರಳಿ ರಾಜ್ಯಪಾಲ ಥಾವರ್ ಚಂದ್‌ ಗೆಹ್ಲೋಟ್‌ಗೆ ರಾಜೀನಾಮೆ ಸಲ್ಲಿಸಿದ್ದಾರೆ.


ಥಾವರ್ ಚಂದ್ ಯಡಿಯೂರಪ್ಪ ಅವರ ರಾಜೀನಾಮೆ ಅಂಗೀಕರಿಸಿದ್ದು, ರಾಜ್ಯದ ಮುಂದಿನ ಮುಖ್ಯಮಂತ್ರಿ ಘೋಷಣೆವರೆಗೂ ಹಂಗಾಮಿ ಸಿಎಂ ಆಗಿ ಯಡಿಯೂರಪ್ಪ ಮುಂದುವರೆಯಲಿದ್ದಾರೆ.


ವಿಧಾನಸೌಧದಲ್ಲಿ ಸೋಮವಾರ ಬಿಜೆಪಿ ಸರ್ಕಾರದ ಎರಡು ವರ್ಷದ ಸಾಧನಾ ಸಮಾವೇಶದಲ್ಲಿ ಮಾತನಾಡಿದ ಯಡಿಯೂರಪ್ಪ ತಾವು ರಾಜೀನಾಮೆ ನೀಡುತ್ತಿರುವುದಾಗಿ ಘೋಷಿಸಿ, "75 ವರ್ಷ ಮೀರಿದ ಯಾರಿಗೂ ಮುಖ್ಯಮಂತ್ರಿಯಾಗಲು ಅವಕಾಶ ನೀಡಿರಲಿಲ್ಲ. ಆದರೆ ನನ್ನ ಮೇಲೆ ನಂಬಿಕೆ ಇಟ್ಟು ಎರಡು ವರ್ಷ ನನಗೆ ಮುಖ್ಯಮಂತ್ರಿಯಾಗಲು ಪಕ್ಷ ಅವಕಾಶ ಮಾಡಿಕೊಟ್ಟಿದೆ. ಇದಕ್ಕಾಗಿ ಧನ್ಯವಾದ" ಎಂದು ಹೇಳಿದ್ದರು.

Previous Post Next Post