ಕರ್ನಾಟಕದ ನೂತನ ರಾಜ್ಯಪಾಲರಾಗಿ ತಾವರ್ ಚೆಂದ್ ಗೆಹ್ಲೋಟ್ ನೇಮಕ

ಕರ್ನಾಟಕದ ನೂತನ ರಾಜ್ಯಪಾಲರಾಗಿ ತಾವರ್ ಚೆಂದ್ ಗೆಹ್ಲೋಟ್ ನೇಮಕ


ಬೆಂಗಳೂರು:
 ಮಹತ್ವದ ಬೆಳವಣಿಗೆಯೊಂದರಲ್ಲಿ ದಿಢೀರ್ ರಾಜ್ಯಪಾಲರ ಬದಲಾವಣೆ ಮಾಡಲಾಗಿದ್ದು, ಕರ್ನಾಟಕದ ನೂತನ ರಾಜ್ಯಪಾಲರಾಗಿ ತಾವರ್ ಚೆಂದ್ ಗೆಹ್ಲೋಟ್ ಅವರನ್ನು ನೇಮಕ ಮಾಡಲಾಗಿದೆ.


ರಾಜ್ಯಪಾಲ ವಜುಭಾಯಿ ವಾಲಾ ಅವರ ಅಧಿಕಾರಾವಧಿ ಮುಗಿದಿರುವ ಹಿನ್ನೆಲೆಯಲ್ಲಿ ತಾವರ್ ಚಂದ್ ಗೆಹ್ಲೋಟ್ ಅವರನ್ನು ನೂತನ ರಾಜ್ಯಪಾಲರನ್ನಾಗಿ ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕ ಮಾಡಲಾಗಿದೆ ಎಂದು ತಿಳಿದುಬಂದಿದೆ.


ಕರ್ನಾಟಕ ಸೇರಿದಂತೆ 8 ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕ ಮಾಡಲಾಗಿದೆ.

Previous Post Next Post