ಕೇಂದ್ರ ಸಚಿವರಾಗಿ ಕರ್ನಾಟಕದ ಎ. ನಾರಾಯಣಸ್ವಾಮಿ, ಶೋಭಾ ಕರಂದ್ಲಾಜೆ, ರಾಜೀವ್ ಚಂದ್ರಶೇಖರ್, ಭಗವಂತ ಖೂಬ ಪ್ರಮಾಣವಚನ ಸ್ವೀಕಾರ

ಕೇಂದ್ರ ಸಚಿವರಾಗಿ ಕರ್ನಾಟಕದ ಎ. ನಾರಾಯಣಸ್ವಾಮಿ, ಶೋಭಾ ಕರಂದ್ಲಾಜೆ, ರಾಜೀವ್ ಚಂದ್ರಶೇಖರ್,  ಭಗವಂತ ಖೂಬ ಪ್ರಮಾಣವಚನ ಸ್ವೀಕಾರ 


ನವದೆಹಲಿ: ಇಂದು ಸಂಜೆ ಮೋದಿ ಸರಕಾರದ 2.O ಸಚಿವ ಸಂಪುಟ ಪುನರ್ ರಚನೆ ನಡೆಯಿತು. ರಾಷ್ಟ್ರಪತಿ ಭವನದಲ್ಲಿ ನಡೆದ ನೂತನ ಕೇಂದ್ರ ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಪ್ರಮಾಣವಚನ ಬೋಧಿಸಿದ್ದಾರೆ. ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಪ್ರಧಾನಿ ಮೋದಿ ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದರು.


ಕರ್ನಾಟಕದ ರಾಜೀವ್ ಚಂದ್ರಶೇಖರ್, ಶೋಭಾ ಕರಂದ್ಲಾಜೆ, ಎ. ನಾರಾಯಣಸ್ವಾಮಿ, ಭಗವಂತ ಖೂಬಾ ಅವರು ನೂತನ ರಾಜ್ಯ ಖಾತೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.


ಶೋಭಾ ಕರಂದ್ಲಾಜೆ ಅವರಿಗೆ ಕೃಷಿ ಹಾಗೂ ರೈತರ ಕಲ್ಯಾಣ ಖಾತೆ, ಎ.ನಾರಾಯಣ ಸ್ವಾಮಿ ಅವರಿಗೆ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ, ರಾಜೀವ್ ಚಂದ್ರಶೇಖರ್ ಅವರಿಗೆ ಕೌಶಲ್ಯಾಭಿವೃದ್ಧಿ ಹಾಗೂ ಉದ್ಯಮಶೀಲತೆ ಹಾಗೂ ಭಗವಂತ ಖೂಬಾ ಅವರಿಗೆ ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ನೀಡಲಾಗಿದೆ.


ಹೆಚ್ಚಿನ ಸುದ್ದಿಗಾಗಿ ...

Previous Post Next Post