ಮೂರನೇ ಅಲೆ ಭೀತಿ, ಕೇರಳದಲ್ಲಿ ಕೊವಿಡ್ ಪ್ರಕರಣ ಹೆಚ್ಚಳ, ವಾರಾಂತ್ಯದ ಲಾಕ್ ಡೌನ್ ಘೋಷಣೆ
ಕೇರಳದಲ್ಲಿ ಕೋವಿಡ್ 19 ಸೋಂಕು ಪ್ರಕರಣ ಹೆಚ್ಚಳವಾಗುತ್ತಿರುವ ಪರಿಣಾಮ ಕೇಂದ್ರ ಸರ್ಕಾರವು ಆರು ಸದಸ್ಯರನ್ನೊಳಗೊಂಡ ರಾಷ್ಟ್ರೀಯ ಸೋಂಕು ನಿಯಂತ್ರಣ ತಂಡವನ್ನು ಅಧ್ಯಯನಕ್ಕಾಗಿ ಕಳುಹಿಸಿರುವುದಾಗಿ ತಿಳಿಸಿದೆ.
ಕೇರಳದಲ್ಲಿ ಹೆಚ್ಚಿನ ಪ್ರಮಾಣದ ಕೋವಿಡ್ ಪ್ರಕರಣಗಳು ವರದಿಯಾಗುತ್ತಿದೆ. ಈ ನಿಟ್ಟಿನಲ್ಲಿ ರಾಷ್ಟ್ರೀಯ ಸೋಂಕು ನಿಯಂತ್ರಣ ತಂಡ ರಾಜ್ಯಕ್ಕೆ ಅಗತ್ಯವಾದ ನೆರವನ್ನು ನೀಡಲಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ ಸುಖ್ ಮಾಂಡವ್ಯ ತಿಳಿಸಿದ್ದಾರೆ.
ಕೇರಳದ ಮಲಪ್ಪುರಂ, ತ್ರಿಶ್ಶೂರ್, ಕೋಝಿಕೋಡ್, ಎರ್ನಾಕುಲಂ, ಪಾಲಕ್ಕಾಡ್, ಕೊಲ್ಲಂ, ಅಳಪ್ಪುಝಾ, ಕಣ್ಣೂರು, ತಿರುವನಂತಪುರಂ ಹಾಗೂ ಕೊಟ್ಟಾಯಂನಲ್ಲಿ ಅತೀ ಹೆಚ್ಚು ಕೋವಿಡ್ 19 ಸೋಂಕು ಪ್ರಕರಣಗಳು ಪತ್ತೆಯಾಗಿರುವುದಾಗಿ ವರದಿ ವಿವರಿಸಿದೆ.