ಕರ್ನಾಟಕದ ಉಪಮುಖ್ಯಮಂತ್ರಿಗಳಾಗಿ ಆರ್ ಅಶೋಕ್, ಗೋವಿಂದ ಕಾರಜೋಳ, ಬಿ ಶ್ರೀರಾಮುಲು ಆಯ್ಕೆ

ಕರ್ನಾಟಕದ ಉಪಮುಖ್ಯಮಂತ್ರಿಗಳಾಗಿ ಆರ್ ಅಶೋಕ್, ಗೋವಿಂದ ಕಾರಜೋಳ, ಬಿ ಶ್ರೀರಾಮುಲು ಆಯ್ಕೆ


ಬೆಂಗಳೂರು : ಕರ್ನಾಟಕ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆಯಾದ ನಂತರ ನೂತನ ಉಪ ಮುಖ್ಯಮಂತ್ರಿಗಳಾಗಿ ಆರ್ ಅಶೋಕ್, ಬಿ.ಶ್ರೀರಾಮುಲು ಹಾಗೂ ಗೋವಿಂದ ಕಾರಜೋಳ ಅವರನ್ನು ಆಯ್ಕೆ ಮಾಡಲಾಗಿದೆ.


ಮುಖ್ಯಮಂತ್ರಿ ಸ್ಥಾನಕ್ಕೆ ಬಿಎಸ್ ಯಡಿಯೂರಪ್ಪ ರಾಜೀನಾಮೆ ನೀಡಿದ ನಂತರ, ಈಗ ಕರ್ನಾಟಕ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿಯನ್ನು ಇಂದಿನ ಬಿಜೆಪಿ ಸಂಸದೀಯ ಮಂಡಳಿಯ ಸಭೆಯಲ್ಲಿ ಒಕ್ಕೊರಲಿನಿಂದ ಘೋಷಣೆ ಮಾಡಲಾಗಿದೆ. ಈ ಮೂಲಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿಯವರು ನೇಮಕಗೊಂಡಿದ್ದಾರೆ. 


ರಾಜ್ಯದಲ್ಲಿ ಇಂದು 1501 ಪಾಸಿಟಿವ್, 2039 ಗುಣಮುಖರು


ಬೆಂಗಳೂರು: ಕರ್ನಾಟಕದಲ್ಲಿ ಮಂಗಳವಾರ (ಜುಲೈ 28) ಒಟ್ಟು 1501 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಇಂದು 2039 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಡಿಸ್​ಚಾರ್ಜ್​ ಆಗಿದ್ದಾರೆ. ರಾಜ್ಯದಲ್ಲಿ ಈವರೆಗೆ ಒಟ್ಟು 28,97,664 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿತ್ತು. ಈ ಪೈಕಿ 28,38,717 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಒಟ್ಟು 22,487 ಮಂದಿಯಲ್ಲಿ ಸೋಂಕು ಸಕ್ರಿಯವಾಗಿದೆ.


ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿಗೆ ಸೋಂಕು?
ಬಾಗಲಕೋಟೆ 3, ಬಳ್ಳಾರಿ 4, ಬೆಳಗಾವಿ 51, ಬೆಂಗಳೂರು ಗ್ರಾಮಾಂತರ 19, ಬೆಂಗಳೂರು ನಗರ 354, ಚಾಮರಾಜನಗರ, ಚಿಕ್ಕಬಳ್ಳಾಪುರ 31, ಚಿಕ್ಕಮಗಳೂರು 62, ಚಿತ್ರದುರ್ಗ 8, ದಕ್ಷಿಣ ಕನ್ನಡ 247, ದಾವಣೆಗೆರೆ 24, ಧಾರವಾಡ 11, ಗದಗ 5, ಹಾಸನ 98, ಹಾವೇರಿ 7, ಕಲಬುರಗಿ 13, ಕೊಡಗು 46, ಕೋಲಾರ 41, ಕೊಪ್ಪಳ 15, ಮಂಡ್ಯ 55, ಮೈಸೂರು 108, ರಾಯಚೂರು 2, ರಾಮನಗರ 4, ಶಿವಮೊಗ್ಗ 71, ತುಮಕೂರು 47, ಉಡುಪಿ 98, ಉತ್ತರ ಕನ್ನಡ 40, ವಿಜಯಪುರ 5, ಯಾದಗಿರಿ 1 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.



أحدث أقدم