ಈಶಾನ್ಯ ಸಾರಿಗೆ ನಿಗಮ (NEKRTC) ವನ್ನು 'ಕಲ್ಯಾಣ ಕರ್ನಾಟಕ ಸಾರಿಗೆ ನಿಗಮ' ಎಂದು ಮರು ನಾಮಕರಣ ಮಾಡಿ ರಾಜ್ಯ ಸರಕಾರದ ಆದೇಶ

ಈಶಾನ್ಯ ಸಾರಿಗೆ ನಿಗಮ (NEKRTC) ವನ್ನು 'ಕಲ್ಯಾಣ ಕರ್ನಾಟಕ ಸಾರಿಗೆ ನಿಗಮ' ಎಂದು ಮರು ನಾಮಕರಣ ಮಾಡಿ ರಾಜ್ಯ ಸರಕಾರದ ಆದೇಶ 


ಬೆಂಗಳೂರು : ಇದುವರೆಗೆ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ( North East Karnataka Road Transport Corporation) ಎಂಬುದಾಗಿ ಕರೆಯಲಾಗುತ್ತಿದ್ದಂತ NEKRTCಯನ್ನು, ಇದೀಗ ರಾಜ್ಯ ಸರ್ಕಾರವು ಕಲ್ಯಾಣ ಕರ್ನಾಟಕ ಸಾರಿಗೆ ನಿಗಮ ಎಂಬುದಾಗಿ ಮರು ನಾಮಕರಣ ಮಾಡಿದೆ.


ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಅವರು, ಸಾರಿಗೆ ನಿಗಮಗಳ ಅಧಿನಿಯಮ 1950 ರ ( ಕೇಂದ್ರ ಅಧಿನಿಯಮ 64) ಕಲಮ್ ಮೂರರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹೆಸರನ್ನು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಎಂದು ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.


ಹೈದರಾಬಾದ್-ಕರ್ನಾಟಕ ಪ್ರದೇಶಕ್ಕೆ ಕಲ್ಯಾಣ ಕರ್ನಾಟಕ ಎಂದು ಮರುನಾಮಕರಣವಾದ ನಂತರ ಈಶಾನ್ಯ ಸಾರಿಗೆಗೂ ಈ ರೀತಿ ಮರು ನಾಮಕರಣ ಮಾಡಬೇಕೆಂದು ಬಹುದಿನಗಳ ಬೇಡಿಕೆ ಸ್ಥಳೀಯರಿಂದ ವ್ಯಕ್ತವಾದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.


ಇಂದು ಸಂಜೆ ಮೋದಿ ಸಚಿವ ಸಂಪುಟದ ಪುನರ್ ರಚನೆ  

ಪ್ರಧಾನಿ ನರೇಂದ್ರ ಮೋದಿ ಇಂದು ಸಚಿವ ಸಂಪುಟವನ್ನು ಪುನಾರಚಿಸಲಿದ್ದು, ಎಲ್ಲರ ಚಿತ್ತ ದೆಹಲಿಯತ್ತ ನೆಟ್ಟಿದೆ. ಮೂಲಗಳ ಪ್ರಕಾರ ಸಂಪುಟ ಪುನರಚನೆಯಲ್ಲಿ ರಾಜ್ಯದ ಇಬ್ಬರಿಗೆ ಸ್ಥಾನ ಸಿಗುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ.


ಸಂಪುಟ ಪುನರಚನೆ ಬಳಿಕ ಇಂದು ಸಂಜೆ 5.30ರಿಂದ 6ರ ನಡುವೆ ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ.
Previous Post Next Post