ರಾಜ್ಯದಲ್ಲಿ ಇಂದು 1,669 ಪಾಸಿಟಿವ್, 1672 ಗುಣಮುಖರು, ಪಾಸಿಟಿವ್ ರೇಟ್ ಶೇ.0.98
ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಆಗಸ್ಟ್ 13) ಹೊಸದಾಗಿ 1,669 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,26,401 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 28,66,739 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 22 ಜನರ ಸಾವು ಸಂಭವಿಸಿದೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 36,933 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 22,703 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ ಇಂದು ಒಂದೇ ದಿನ 425 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,32,220 ಕ್ಕೆ ಏರಿಕೆಯಾಗಿದೆ. 12,32,220 ಸೋಂಕಿತರ ಪೈಕಿ 12,08,097 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿಗೆ 5 ಮಂದಿ ಬಲಿಯಾಗಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 15,933 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 8,189 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.
ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ
ಬಾಗಲಕೋಟೆ 2, ಬಳ್ಳಾರಿ 2, ಬೆಳಗಾವಿ 49, ಬೆಂಗಳೂರು ಗ್ರಾಮಾಂತರ 14, ಬೆಂಗಳೂರು ನಗರ 425, ಬೀದರ್ 0, ಚಾಮರಾಜನಗರ 22, ಚಿಕ್ಕಬಳ್ಳಾಪುರ 4, ಚಿಕ್ಕಮಗಳೂರು 51, ಚಿತ್ರದುರ್ಗ 16, ದಕ್ಷಿಣ ಕನ್ನಡ 390, ದಾವಣಗೆರೆ 18, ಧಾರವಾಡ 8, ಗದಗ 3, ಹಾಸನ 113, ಹಾವೇರಿ 0, ಕಲಬುರಗಿ 3, ಕೊಡಗು 73, ಕೋಲಾರ 27, ಕೊಪ್ಪಳ 2, ಮಂಡ್ಯ 35, ಮೈಸೂರು 106, ರಾಯಚೂರು 2, ರಾಮನಗರ 0, ಶಿವಮೊಗ್ಗ 56, ತುಮಕೂರು 69, ಉಡುಪಿ 115, ಉತ್ತರ ಕನ್ನಡ 62, ವಿಜಯಪುರ 1, ಯಾದಗಿರಿ ಜಿಲ್ಲೆಯಲ್ಲಿ 1 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.
ಕೇರಳದಲ್ಲಿ ಇಂದು 20,452 ಪಾಸಿಟಿವ್, 16,856 ಗುಣಮುಖರು, ಪಾಸಿಟಿವ್ ರೇಟ್ 14.35%
ಕೇರಳದಲ್ಲಿ ಇಂದು 20,452 ಪಾಸಿಟಿವ್ ದೃಡಪಟ್ಟಿದೆ. ಕಳೆದ 24 ಗಂಟೆಯಲ್ಲಿ 1,42,501 ಸ್ಯಾಂಪಲ್ ಪರೀಕ್ಷೆ ಮಾಡಲಾಗಿದ್ದು ಟೆಸ್ಟ್ ಪಾಸಿಟಿವಿಟಿ 14.35% ಇದೆ. ಚಿಕಿತ್ಸೆಯಲ್ಲಿದ್ದ 16,856 ಮಂದಿ ಇಂದು ರೋಗ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದರು. ಇನ್ನು ರಾಜ್ಯದಲ್ಲಿ 1,80,000 ಸಕ್ರಿಯ ಪ್ರಕರಣಗಳು ಇವೆ.