ಏರಿಕೆಯಲ್ಲಿದ್ದ ಕೋರೋಣ ದಿಢೀರ್ ಕುಸಿತ, ದೇಶದಲ್ಲಿ ಕಳೆದ 24 ಗಂಟೆಯಲ್ಲಿ 30,549 ಪಾಸಿಟಿವ್
ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 30,549 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.
ಕಳೆದ 24 ಗಂಟೆಯಲ್ಲಿ 422 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಇದುವರೆಗೂ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 425195ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 404958 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 38887 ಜನರು ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 30896354 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ನಿನ್ನೆ ದೇಶದಲ್ಲಿ 16,49,295 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 61,09,587 ಜನರಿಗೆ ಲಸಿಕೆ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 47,85,44,114 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.
ಸೂಚನೆ- ದೇಶದಲ್ಲಿ ಕೊರೋನಾ ಸೋಂಕಿನ ಹಾವಳಿ ಕಡಿಮೆಯಾಗಿದ್ದರೂ ಸಂಪೂರ್ಣವಾಗಿ ನಿಂತಿಲ್ಲ. ಆದ್ದರಿಂದ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಮತ್ತು ಕೊರೋನಾ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ. ಜೊತೆಗೆ ವ್ಯಾಕ್ಸಿನೇಷನ್ ಪಡೆಯುವುದನ್ನು ಮರೆಯದಿರಿ. ಇದು 'ಈಗಿನ ಸುದ್ದಿ'ಯ ಕಳಕಳಿ