ಕೊರೊನಾ ಲಸಿಕೆ ವಿತರಣೆಯಲ್ಲಿ ಭಾರತದ ಹೊಸ ದಾಖಲೆ, ದೇಶದಲ್ಲಿ 59 ಕೋಟಿ ಡೋಸ್ ಲಸಿಕೆ ವಿತರಣೆ
ದೇಶಾದ್ಯಂತ ಲಸಿಕಾ ಅಭಿಯಾನದಡಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಭಾರತ ಸರ್ಕಾರ ಉಚಿತವಾಗಿ ಲಸಿಕೆ ಒದಗಿಸುವ ಮೂಲಕ ಬೆಂಬಲ ನೀಡುತ್ತಿದೆ. ಕೋವಿಡ್-19 ಹೊಸ ಸಾರ್ವತ್ರೀಕರಣದ ಲಸಿಕಾ ಅಭಿಯಾನದಡಿ ದೇಶದಲ್ಲಿ ಲಸಿಕೆ ಉತ್ಪಾದಕರು ಉತ್ಪಾದಿಸುವ ಶೇ. 75% [ಉಚಿತವಾಗಿ] ಲಸಿಕೆಯನ್ನು ಕೇಂದ್ರ ಸರ್ಕಾರ ಖರೀದಿಸಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಒದಗಿಸುತ್ತಿದೆ. ದೇಶಾದ್ಯಂತ ನಡೆಯುತ್ತಿರುವ ಬೃಹತ್ ಕೋವಿಡ್-19 ಲಸಿಕೆ ಅಭಿಯಾನದಲ್ಲಿ ಇದುವರೆಗೆ 59.55 ಕೋಟಿ ಡೋಸ್ ಲಸಿಕೆ ಹಾಕಲಾಗಿದೆ.