ದಕ್ಷಿಣ ಕನ್ನಡ ಸೇರಿ 8 ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಮುಂದುವರಿಕೆ, ಸದ್ಯಕ್ಕೆ ಲಾಕ್ ಡೌನ್ ಇಲ್ಲ : ಸಿಎಂ ಬಸವರಾಜ್ ಬೊಮ್ಮಾಯಿ

ದಕ್ಷಿಣ ಕನ್ನಡ ಸೇರಿ 8 ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಮುಂದುವರಿಕೆ, ಸದ್ಯಕ್ಕೆ ಲಾಕ್ ಡೌನ್ ಇಲ್ಲ : ಸಿಎಂ ಬಸವರಾಜ್ ಬೊಮ್ಮಾಯಿ


ಬೆಂಗಳೂರು : ಕೋವಿಡ್ ಪ್ರಕರಣಗಳು ಹೆಚ್ಚಿರುವ ಎಂಟು ಜಿಲ್ಲೆಗಳಲ್ಲಿ ಮತ್ತೆ ವೀಕೆಂಡ್ ಕರ್ಫ್ಯೂ ಮುಂದುವರೆಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶ ಹೊರಡಿಸಿದ್ದಾರೆ.


ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಸಚಿವರು, ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಈ ನಿರ್ಧಾರಕ್ಕೆ ಬರಲಾಗಿದೆ ಎಂದ ಅವರು ಸದ್ಯಕ್ಕೆ ಲಾಕ್ ಡೌನ್ ಅಥವಾ ಯಾವುದೇ ಹೊಸ ನಿಯಮಗಳ ಜಾರಿ ಬೇಡ, ಅಗತ್ಯ ಬಿದ್ದರೆ ವೀಕೆಂಡ್ ಕರ್ಫ್ಯೂ ಜಾರಿಗೊಳಿಸೋಣ ಎಂದು ಹೇಳಿದ್ದಾರೆ.


ಕೋವಿಡ್ ಪ್ರಕರಣ ಹೆಚ್ಚಿರುವ ಜಿಲ್ಲೆಗಳಲ್ಲಿ ಈಗಾಗಲೇ ರಾತ್ರಿ ಕರ್ಫ್ಯೂ ಹಾಗೂ ವೀಕೆಂಡ್ ಕರ್ಫ್ಯೂ ಜಾರಿ ಮಾಡಲಾಗಿತ್ತು ಅದೇ ನಿಯಮಗಳನ್ನು ಮುಂದಿನ ದಿನಗಳಿಗೂ ಮುಂದುವರೆಸುವಂತೆ ತೀರ್ಮಾನ ಕೈಗೊಳ್ಳಲಾಯಿತು.


ದಕ್ಷಿಣ ಕನ್ನಡ, ಕಲಬುರ್ಗಿ, ಮೈಸೂರು, ಚಾಮರಾಜನಗರ, ಕೊಡಗು, ಬೆಳಗಾವಿ, ವಿಜಯಪುರ, ಬೀದರ್ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಮುಂದುವರೆಯಲಿದೆ.

Previous Post Next Post