ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ: ಶೇಕಡಾ ಶೇಕಡ 99.9 ವಿದ್ಯಾರ್ಥಿಗಳು ಪಾಸ್, ಓರ್ವ ಮಾತ್ರ ಫೇಲ್

ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ: ಶೇಕಡಾ ಶೇಕಡ 99.9 ವಿದ್ಯಾರ್ಥಿಗಳು ಪಾಸ್, ಓರ್ವ ಮಾತ್ರ ಫೇಲ್


ಬೆಂಗಳೂರು: ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್ ಸಿ ಫಲಿತಾಂಶ ಪ್ರಕಟವಾಗಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಫಲಿತಾಂಶ ಬಿಡುಗಡೆ ಮಾಡಿದರು.


ಜುಲೈ 19 ಮತ್ತು 22ರಂದು ನಡೆದಿದ್ದ ಎಸ್ ಎಸ್‌ಎಲ್ ಸಿ ಪರೀಕ್ಷೆಯಲ್ಲಿ ಹಾಜರಾಗಿದ್ದ 8,71,443 ವಿದ್ಯಾರ್ಥಿಗಳಲ್ಲಿ ಒಂದು ವಿದ್ಯಾರ್ಥಿ ಹೊರತುಪಡಿಸಿ ಉಳಿದೆಲ್ಲರೂ ತೇರ್ಗಡೆಯಾಗಿದ್ದಾರೆ. ಆತ ತನ್ನ ಬದಲು ಬೇರೆಯವರಿಂದ ಪರೀಕ್ಷೆ ಬರೆಸಿದ್ದ. ಹೀಗಾಗಿ ಆತನನ್ನು ಅನುತ್ತೀರ್ಣ ಮಾಡಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.


ಕೋವಿಡ್ ಕಾರಣದಿಂದ ಈ ಬಾರಿ ವಿಶಿಷ್ಟ ರೀತಿಯಲ್ಲಿ ಎಸ್‌ಎಸ್‌ಎಲ್ ಸಿ ಪರೀಕ್ಷೆ ನಡೆಸಲಾಗಿತ್ತು. ಮೂರು ವಿಷಯಗಳನ್ನೊಳಗೊಂಡ ಒಂದು ಪತ್ರಿಕೆಯಂತೆ ಒಟ್ಟು ಎರಡು ದಿನ ಪರೀಕ್ಷೆ ನಡೆಸಲಾಗಿತ್ತು.


ಪರೀಕ್ಷೆ ಬರೆದಿರುವ ಎಲ್ಲರನ್ನೂ ಉತ್ತೀರ್ಣಗೊಳಿಸುವುದಾಗಿ ಸರ್ಕಾರ ಘೋಷಣೆ ಮಾಡಿತ್ತು. ಅಂಕ ಆಧಾರಿತ ಫಲಿತಾಂಶ ಇಂದು ಪ್ರಕಟವಾಗಿದೆ. ವಿದ್ಯಾರ್ಥಿಗಳು ತಮ್ಮ ನೊಂದಣಿ ಸಂಖ್ಯೆಯನ್ನು ದಾಖಲಿಸೋ ಮೂಲಕ sslc.karnataka.gov.in ಜಾಲತಾಣಕ್ಕೆ ಭೇಟಿ ನೀಡಿ ವೀಕ್ಷಿಸಬಹುದಾಗಿ ಎಂಬುದಾಗಿ ಶಿಕ್ಷಣ ಸಚಿವರು ತಿಳಿಸಿದರು.

أحدث أقدم