ಕೊರೊನಾ ಹೆಚ್ಚಳ- ಮಂಗಳೂರು ವಿಶ್ವವಿದ್ಯಾನಿಲಯದ ಎಲ್ಲಾ ಪದವಿ ಪರೀಕ್ಷೆಗಳ ರದ್ದು
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತವು ಸರ್ಕಾರದ ನಿರ್ದೇಶನದಂತೆ ಕಾಲಕಾಲಕ್ಕೆ ಎಲ್ಲಾ ಅವಶ್ಯಕ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಕಟ್ಟುನಿಟ್ಟಿನ ನಿರ್ಬಂಧಗಳ ನಂತರವು ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಮತ್ತೆ ಏರಿಕೆ ಆಗಿರುವ ಹಿನ್ನಲೆಯಲ್ಲಿ ಸರ್ಕಾರವು ಉಲ್ಲೇಖದಂತೆ ಕಣ್ಗಾವಲು , ನಿಯಂತ್ರಣ ಮತ್ತು ಜಾಗೃತೆಗೆ ಸಂಬಂಧಿಸಿದಂತೆ ಕೇರಳ ಮತ್ತು ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಆಗಮಿಸುವ ಪ್ರಯಾಣಿಕರಿಗೆ ವಿಶೇಷ ಸರ್ವೇಕ್ಷಣೆಯನ್ನು ಮಾಡಲು ನಿರ್ದೇಶಿಸಿರುತ್ತದೆ.
ಮಂಗಳೂರು ವಿಶ್ವ ವಿದ್ಯಾನಿಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕಾಗಿ ಅಂತರ್ ಜಿಲ್ಲೆಯಾದ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯಿಂದ ಆಗಮಿಸುತ್ತಿದ್ದು, ನೆರೆಯ ರಾಜ್ಯ / ಜಿಲ್ಲೆಗಳಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಯಾಣಿಕರ ಓಡಾಟದಿಂದಾಗಿ ವ್ಯಕ್ತಿಯಿಂದ ವ್ಯಕ್ತಿಗೆ ಸೋಂಕು ಹರಡುವ ಸಾಧ್ಯತೆಗಳಿರುವುದರಿಂದ, ಸಂಭಾವ್ಯ ಅಪಾಯವನ್ನು ತಪ್ಪಿಸಲು ಗಡಿಭಾಗಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸಬೇಕೆಂದು ಸರ್ಕಾರ ನಿರ್ದೇಶನ ನೀಡಿರುವ ಹಿನ್ನಲೆಯಲ್ಲಿ ಈ ಕಛೇರಿ ಆದೇಶ ಸಂ: ಎಂಎಜಿ(2)ಸಿಆರ್ 15/2021/133465:4:25, ದಿನಾಂಕ: 31-07-2/21 ರಂತೆ ಜಿಲ್ಲಾಡಳಿತದಿಂದ ಕೆಲವು ಕಟ್ಟುನಿಟ್ಟಿನ ನಿರ್ಬಂಧಗಳನ್ನು ಹೊರಡಿಸಲಾಗಿರುತ್ತದೆ. ಇದರಿಂದಾಗಿ ಅಂತರ್ ರಾಜ್ಯ / ಜಿಲ್ಲೆಗಳಿಂದ ದಕ್ಷಿಣ ಕನ್ನಡ ಜಿಲ್ಲೆಗೆ ವಿದ್ಯಾಭ್ಯಾನಕ್ಕಾಗಿ ಪ್ರವೇಶಿಸುವ ವಿದ್ಯಾರ್ಥಿಗಳಿಗೆ ಕೂಡಾ ಅನಾನುಕೂಲವಾಗುವ ಸಾಧ್ಯತೆ ಇರುತ್ತದೆ.
ಪ್ರಸ್ತುತ ಸನ್ನಿವೇಶವನ್ನು ಸಾರ್ವಜನಿಕ ಹಿತದೃಷ್ಟಿಯಿಂದ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕಾಗಿರುವುದರಿಂದ ಹಾಗೂ ಯಾವುದೇ ವಿನಾಯಿತಿಯನ್ನು ನೀಡಲು ಅವಕಾವಿಲ್ಲದಿರುವುದರಿಂದ, ಮಂಗಳೂರು ವಿಶ್ವಾವಿದ್ಯಾನಿಲಯದಲ್ಲಿ ಪ್ರಸ್ತುತ ನಡೆಯುತ್ತಿರುವ ಎಲ್ಲಾ ಪದವಿ ಪರೀಕ್ಷೆಗಳನ್ನು ತಾತ್ಕಾಲಿಕವಾಗಿ ರದ್ದುಗೊಳಿಸಿ ಮುಂದಿನ ಆದೇಶದವರೆಗೆ ತರಗತಿ ಹಾಗೂ ಪರೀಕ್ಷೆಗಳನ್ನು ಮುಂದೂಡುವಂತೆ ಸೂಚಿಸಿದೆ ಹಾಗೂ ಕೈಗೊಂಡ ಕ್ರಮದ ಬಗ್ಗೆ ಈ ಕಛೇರಿಗೆ ವರದಿಯನ್ನು ನೀಡುವಂತೆ ತಿಳಿಸಿದೆ.