ದಕ್ಷಿಣ ಕನ್ನಡ ಕೊಡಗಿನಲ್ಲಿ ವೀಕೆಂಡ್ ಕರ್ಫ್ಯೂ ಮುಂದುವರಿಕೆ, ರಾಜ್ಯಾದ್ಯಂತ ನೈಟ್ ಕರ್ಫ್ಯೂ ಮುಂದುವರಿಯಲಿದೆ

ದಕ್ಷಿಣ ಕನ್ನಡ ಕೊಡಗಿನಲ್ಲಿ ವೀಕೆಂಡ್ ಕರ್ಫ್ಯೂ ಮುಂದುವರಿಕೆ, ರಾಜ್ಯಾದ್ಯಂತ ನೈಟ್ ಕರ್ಫ್ಯೂ ಮುಂದುವರಿಯಲಿದೆ


ಬೆಂಗಳೂರು: ಉಡುಪಿ, ಚಿಕ್ಕಮಗಳೂರು, ಹಾಸನ, ಮೈಸೂರು, ಕೋಲಾರ, ಶಿವಮೊಗ್ಗ ಜಿಲ್ಲೆಗಳಲ್ಲಿ ವಿಧಿಸಿದ್ದ ಕೊರೊನಾ ನಿರ್ಬಂಧ ಸಡಿಲಿಕೆ ಮಾಡಲಾಗುವುದು. ಕೊಡಗು, ದಕ್ಷಿಣ ಕನ್ನಡ ಹೊರತುಪಡಿಸಿ ಉಳಿದೆಡೆ ಕೊರೊನಾ ನಿರ್ಬಂಧ ಸಡಿಲಿಸಲಾಗುವುದು ಎಂದು ತಿಳಿಸಲಾಗಿದೆ. ಉಳಿದ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಹಿಂಪಡೆಯುತ್ತಿದ್ದೇವೆ. ಎಂದು ಆರ್. ಅಶೋಕ್ ಮಾಹಿತಿ ನೀಡಿದ್ಧಾರೆ.


ಕಲ್ಯಾಣ ಮಂಟಪಗಳಲ್ಲಿ ಸಭೆ, ಸಮಾರಂಭಗಳಿಗೆ ಅವಕಾಶ ನೀಡಲಾಗುವ ಬಗ್ಗೆ ಆರ್. ಅಶೋಕ್ ಹೇಳಿದ್ದಾರೆ. ಸಣ್ಣಪುಟ್ಟ ಛತ್ರಗಳಲ್ಲಿ ಶೇಕಡಾ 50 ರಷ್ಟು ಜನ ಸೇರಲು ಅವಕಾಶ ನೀಡಲಾಗುವುದು. ದೊಡ್ಡ ಛತ್ರಗಳಲ್ಲಿ 400 ಕ್ಕಿಂತ ಹೆಚ್ಚು ಜನರು ಸೇರುವಂತಿಲ್ಲ ಎಂದು ಅವರು ತಿಳಿಸಿದ್ದಾರೆ. ಉಡುಪಿ, ಚಿಕ್ಕಮಗಳೂರು, ಹಾಸನ, ಮೈಸೂರು, ಕೋಲಾರ, ಶಿವಮೊಗ್ಗ ಜಿಲ್ಲೆಗಳಲ್ಲಿ ವಿಧಿಸಿದ್ದ ನಿರ್ಬಂಧ ಸಡಿಲಿಕೆ ಮಾಡಲಾಗುವುದು. ಕೊಡಗು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಥಾಸ್ಥಿತಿ ಮುಂದುವರಿಯಲಿದೆ. ಉಳಿದ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಹಿಂಪಡೆಯುತ್ತಿದ್ದೇವೆ ಎಂದು ಅಶೋಕ್ ಹೇಳಿದ್ದಾರೆ. ರಾಜ್ಯಾದ್ಯಂತ ನೈಟ್ ಕರ್ಫ್ಯೂ ಮುಂದುವರಿಯಲಿದೆ. ರಾತ್ರಿ 9 ರಿಂದ ಮುಂಜಾನೆ 5 ಗಂಟೆವರೆಗೆ ನೈಟ್​ಕರ್ಫ್ಯೂ ಜಾರಿಯಲ್ಲಿ ಇರಲಿದೆ.


ತಜ್ಞರ ಜತೆ ಸಿಎಂ ಬಸವರಾಜ ಬೊಮ್ಮಾಯಿ ಮಹತ್ವದ ಸಭೆ ನಡೆಸಿದ್ದಾರೆ. ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ತಜ್ಞರ ಜತೆ ಸಭೆ ನಡೆಸಲಾಗಿದೆ. ಸಚಿವರಾದ ಕೆ. ಸುಧಾಕರ್, ಬಿ.ಸಿ.ನಾಗೇಶ್, ಆರ್.ಅಶೋಕ್, ಸಿಎಸ್​ಪಿ ರವಿಕುಮಾರ್, ಡಿಜಿ & ಐಜಿಪಿ ಪ್ರವೀಣ್ ಸೂದ್, ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ, ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಸಭೆಯಲ್ಲಿ ಭಾಗಿ ಆಗಿದ್ದಾರೆ.

Previous Post Next Post